ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಕ್ರಮ ಗಣಿ: ಎರಡನೇ ವರದಿಯೇ ಅಂತಿಮ- ಹೆಗ್ಡೆ (Lokayuktha | Santhosh hegde | BJP | Bangalore)
Bookmark and Share Feedback Print
 
ಅಕ್ರಮ ಗಣಿಗಾರಿಕೆ ಕುರಿತು ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ಬಗ್ಗೆ ಲೋಕಾಯುಕ್ತ ನ್ಯಾ| ಸಂತೋಷ್ ಹೆಗ್ಡೆ ಮತ್ತೊಮ್ಮೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿರುವ ಎರಡನೇ ವರದಿಯ ನಂತರ ಮತ್ತೆ ಯಾವುದೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

2008ರಲ್ಲಿ ಸರ್ಕಾರಕ್ಕೆ ಮೊದಲನೇ ವರದಿಯನ್ನು ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಎರಡನೇ ವರದಿ ಸಲ್ಲಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ರಾಜ್ಯದಲ್ಲಿ 10 ಕಂಪೆನಿಗಳು ಒತ್ತುವರಿ ಮಾಡಿಕೊಂಡು ಬೊಕ್ಕಸಕ್ಕೆ 5085 ಕೋಟಿ ರೂ. ನಷ್ಟ ಮಾಡಿರುವ ಬಗ್ಗೆ ಇಂಡಿಯನ್ ಬ್ಯೂರೋ ಆಫ್ ಮಿನರಲ್ಸ್ ಸಹ ಸ್ಪಷ್ಟಪಡಿಸಿದೆ. ಈ ಕುರಿತು ಮೊದಲನೇ ವರದಿಯಲ್ಲೇ ತಿಳಿಸಿದ್ದೇನೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಇದೇ ವೇಳೆ ಮೊದಲನೇ ವರದಿಯಲ್ಲಿ ಕನಕಪುರ, ರಾಮನಗರ, ಚನ್ನಪಟ್ಟಣ, ಚಾಮರಾಜನಗರದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ತಿಳಿಸಿದ್ದರೆ, ತುಮಕೂರು, ಚಿತ್ರದುರ್ಗದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ಬಗ್ಗೆ ಎರಡನೇ ವರದಿಯಲ್ಲಿ ತಿಳಿಸಿದ್ದೇನೆ ಎಂದು ವಿವರಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ