ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೇಂದ್ರ ಸರ್ಕಾರದ ಜತೆ ಸಂಘರ್ಷ ಇಲ್ಲ: ಯಡಿಯೂರಪ್ಪ (BJP | UPA | Yeddyurappa | Congress | Karnataka)
Bookmark and Share Feedback Print
 
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆ ಸಂಘರ್ಷಕ್ಕೆ ಇಳಿಯದೆ ಸೌಹಾರ್ದಯುತವಾಗಿ ಮಾತುಕತೆ ಮೂಲಕ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣವಾಗಿ ಸಹಕಾರ ನೀಡದಿದ್ದರೂ, ಕೆಲವು ವಿಷಯಗಳಲ್ಲಿ ನೀಡುತ್ತಿರುವ ಸಹಕಾರ ತೃಪ್ತಿ ತಂದಿದೆ ಎಂದರು. ಆದರೆ ಈ ವಿಷಯದಲ್ಲಿ ಕೇಂದ್ರದ ಜೊತೆ ಸಂಘರ್ಷಕ್ಕೆ ಇಳಿಯದೆ ಸೌಹಾರ್ದಯುತವಾಗಿ ಸಮಸ್ಯೆಯನ್ನು ಇತ್ಯರ್ಥಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಮಗೆ ಸಂಪೂರ್ಣವಾಗಿ ಸಹಕಾರ ನೀಡಿಲ್ಲ ಎಂದು ತಾವು ಆಪಾದಿಸುವುದಿಲ್ಲ. ಆದರೆ ಕೆಲವು ವಿಚಾರದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಹಕಾರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗಣಿಗಾರಿಕೆಯಿಂದ ಬೊಕ್ಕಸಕ್ಕೆ ಐದು ಸಾವಿರ ಕೋಟಿ ರೂ.ಗೂ ಅಧಿಕ ಹಣ ನಷ್ಟವಾಗಿದೆ ಎಂಬ ಲೋಕಾಯುಕ್ತರ ವರದಿ ಬಗ್ಗೆ ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ದಾಖಲೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಕಾನೂನು ಚೌಕಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಸಂಬಂಧಿತ ಮಾಹಿತಿ ಹುಡುಕಿ