ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಚರ್ಚೆಗೆ ಬನ್ನಿ: ಸಿಎಂಗೆ ಮಾನವ ಹಕ್ಕು ಆಯೋಗ ಅಧ್ಯಕ್ಷರ ಸವಾಲ್ (Yeddyurappa | BJP | SR Nayak | Halappa | Karnataka)
Bookmark and Share Feedback Print
 
ಮಾನವ ಹಕ್ಕುಗಳ ಆಯೋಗದ ಕಾರ್ಯ ವೈಖರಿ ಬಗ್ಗೆ ವಿನಾಕಾರಣ ಟೀಕಿಸುವ ಬದಲು ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಎಸ್.ಆರ್. ನಾಯಕ್ ಸವಾಲು ಹಾಕಿದ್ದಾರೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವ ಹಕ್ಕುಗಳ ಆಯೋಗವನ್ನು ಮುಚ್ಚಿಹಾಕಿ ಅದರ ಅಧ್ಯಕ್ಷರ ಮಾನವನ್ನು ಬೀದಿಗೆ ಹರಾಜು ಮಾಡುವ ದುಷ್ಟ ಪ್ರಯತ್ನ ನಡೆಯುತ್ತಿದೆ. ಅಲ್ಲದೆ, ನನಗೆ ಪ್ರಾಣ ಭೀತಿ ಕೂಡ ಇದೆ. ಈ ಬಗ್ಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಹೇಳಿದ್ದಾರೆ.

ರಾಜ್ಯ ಸರ್ಕಾರದ ಕೆಲ ಸಚಿವರು ಹಾಗೂ ಶಾಸಕರು ಸೇರಿದಂತೆ ಹಲವರು ತಮ್ಮ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳ ಕುಮ್ಮಕ್ಕಿದೆ ಎಂದು ಅವರು ಆರೋಪಿಸಿದರು.

ಸಾರ್ವಜನಿಕ ಸೇವೆಯಲ್ಲಿರುವವರು ಇಂತಹ ಹೇಳಿಕೆ ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆಡಳಿತಾ ಸರ್ಕಾರದ ಸಚಿವರುಗಳು ಹೇಳಿಕೆ ನೀಡುವ ಮೂಲಕ ಆಯೋಗದ ಅಧ್ಯಕ್ಷರ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ