ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೇ 10ರೊಳಗೆ ಹಾಜರಾಗಿ: ಹಾಲಪ್ಪಗೆ ಸಿಐಡಿ ನೋಟಿಸ್ (Halappa | CID | Yeddyurappa | Rape case | Congress)
Bookmark and Share Feedback Print
 
NRB
ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧ ಸಿಐಡಿ ಅಧಿಕಾರಿಗಳು ಕೊನೆಗೂ ನೋಟಿಸ್ ಜಾರಿಗೊಳಿಸಿದ್ದು, ಮೇ 10 ರೊಳಗೆ ಖುದ್ದು ಅಧಿಕಾರಿಗಳ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.

ಬಂಧನದ ಭೀತಿಯಲ್ಲಿರುವ ಹಾಲಪ್ಪ ತಲೆತಪ್ಪಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ತನಿಖಾಧಿಕಾರಿಗಳ ಮುಂದೆ ಖುದ್ದು ಹಾಜರಾಗುವಂತೆ ಸೂಚಿಸಿ ಹಾಲಪ್ಪ ಅವರ ಬೆಂಗಳೂರು, ಸೊರಬ ನಿವಾಸಗಳಲ್ಲಿ ನೋಟಿಸ್ ಅಂಟಿಸಿದ್ದಾರೆ. ಅತ್ಯಾಚಾರ ಆರೋಪದ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದ ನಂತರ ಹಾಲಪ್ಪ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತದನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹಾಲಪ್ಪ ಜೊತೆ ರಹಸ್ಯವಾಗಿ ಮಾತುಕತೆ ನಡೆಸಿದ್ದರು, ಬಳಿಕ ಹಾಲಪ್ಪ ನಾಪತ್ತೆಯಾಗಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ಕೂಡ, ಹಾಲಪ್ಪನವರ ಮನಸ್ಸಿಗೆ ನೋವಾಗಿರುವುದರಿಂದ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ ಎಂದು ಸಮಜಾಯಿಷಿ ಕೊಟ್ಟಿದ್ದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಆದರೆ ವಿರೋಧ ಪಕ್ಷ ಕಾಂಗ್ರೆಸ್ ಮುಖಂಡರು ಮಾತ್ರ, ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹಾಲಪ್ಪನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತೀವ್ರ ಪ್ರತಿಭಟನೆ ನಡೆಸಿ, ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ಭೇಟಿಯಾಗಿ ಮನವಿಯನ್ನೂ ಕೂಡ ಕೊಟ್ಟಿದ್ದರು. ಅಂತೂ ಹಾಲಪ್ಪ ಬಂಧನಕ್ಕೆ ದಿನೇ ದಿನೇ ಒತ್ತಡ ಹೆಚ್ಚುತ್ತಿರುವ ಪರಿಣಾಮ ಅಧಿಕಾರಿಗಳು ಖುದ್ದು ಹಾಜರಾತಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ವೆಂಕಟೇಶ್ ಮೂರ್ತಿ ಪುತ್ರನ ವಿಚಾರಣೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವೆಂಕಟೇಶ್ ಮೂರ್ತಿ ಪುತ್ರ ನೂತನ್‌ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಮಾಹಿತಿ ಪಡೆದಿರುವುದಾಗಿ ತಿಳಿಸಿದ್ದಾರೆ.

ಶಿವಮೊಗ್ಗದ ಗೆಸ್ಟ್ ಹೌಸ್‌ನಲ್ಲಿ ಬುಧವಾರ ವೆಂಕಟೇಶ್ ಮೂರ್ತಿ ಪುತ್ರ ನೂತನ್‌ನನ್ನು ಸಿಐಡಿ ಅಧಿಕಾರಿಗಳ ತಂಡ ತೀವ್ರ ವಿಚಾರಣೆಗೆ ಒಳಪಡಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಆತ ಕೂಡ ಮನೆಯಲ್ಲಿ ಇದ್ದಿದ್ದಾನೆನ್ನಲಾಗಿದ್ದು, ಆ ಹಿನ್ನೆಲೆಯಲ್ಲಿ ನೂತನ್ ವಿಚಾರಣೆ ನಡೆಸಿರುವುದಾಗಿ ವಿವರಿಸಿದ್ದಾರೆ.

ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಸ್ನೇಹಿತ ವೆಂಕಟೇಶ್ ಮೂರ್ತಿ ಪತ್ನಿ ಚಂದ್ರಾವತಿ ಮೇಲೆ ಅತ್ಯಾಚಾರ ನಡೆಸಿರುವುದಾಗಿ ದೂರು ಕೊಟ್ಟಿದ್ದರು. ಇದೀಗ ಸಿಐಡಿ ಅಧಿಕಾರಿಗಳು ಪ್ರಕರಣದ ಕುರಿತು ವೆಂಕಟೇಶ್ ಮೂರ್ತಿ, ಪತ್ನಿ ಚಂದ್ರಾವತಿ ವಿಚಾರಣೆ ನಡೆಸಿ, ಘಟನೆ ನಡೆದ ಸ್ಥಳವನ್ನು ಪರಿಶೀಲಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ