ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಎಸ್‌ಎಸ್ಎಲ್‌ಸಿ-ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ (karnataka puc result 2010 | pre university 2010 | webdunia PU result)
ಎಸ್ಎಸ್ಎಲ್ಸಿ-ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
ಉಡುಪಿ ಪ್ರಥಮ, ದ.ಕ. ದ್ವಿತೀಯ, ಉತ್ತರ ಕನ್ನಡ ತೃತೀಯ
ಬೆಂಗಳೂರು, ಶುಕ್ರವಾರ, 7 ಮೇ 2010( 09:23 IST )
WD
2010ನೇ ಸಾಲಿನ ಪಿಯುಸಿ ಫಲಿತಾಂಶದಲ್ಲಿ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಉಡುಪಿ ಜಿಲ್ಲೆ (ಶೇ.ಶೇ.89.43) ಈ ಬಾರಿ ಪ್ರಥಮ ಸ್ಥಾನ ದಕ್ಕಿಸಿಕೊಂಡಿದ್ದು, ದಕ್ಷಿಣ ಕನ್ನಡ ಶೇ. 88.93ಗಳಿಸಿ ದ್ವಿತೀಯ ಸ್ಥಾನ ಪಡೆದರೆ, ಉತ್ತರ ಕನ್ನಡ ಶೇ.77.27ಗಳಿಸಿ ತೃತೀಯ ಸ್ಥಾನ, ಯಾದಗಿರಿ ಜಿಲ್ಲೆ ಶೇ.33.42ರಷ್ಟು ಪಡೆದು ಕೊನೆಯ ಸ್ಥಾನಕ್ಕಿಳಿದಿದೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಗುರುವಾರ ಸಂಜೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಜೆ 6 ಗಂಟೆಯಿಂದಲೇ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದರು. ಅದೇ ರೀತಿ ಶೀಘ್ರವೇ ನಾಳೆ ಬೆಳಿಗ್ಗೆ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಪಿಯು ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಒಟ್ಟಾರೆ ರಾಜ್ಯಾದ್ಯಂತ ತೇರ್ಗಡೆ ಪ್ರಮಾಣ ಶೇ.61.89ರಷ್ಟು ಎಂದು ವಿವರಿಸಿದರು. ಖಾಸಗಿ ವಿದ್ಯಾರ್ಥಿಗಳ ಫಲಿತಾಂಶ ಶೇ.25.85ರಷ್ಟು ಎಂದರು.
ಕಳೆದ ವರ್ಷದ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿತ್ತು. ರಾಯಚೂರು ಜಿಲ್ಲೆ ಕೊನೆಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಒಟ್ಟಾರೆ ರಾಜ್ಯಾದ್ಯಂತ ಶೇ.43.34ರಷ್ಟು ತೇರ್ಗಡೆ ಹೊಂದಿದ್ದರು. 28ಸರ್ಕಾರಿ ಶಾಲೆಗಳು ಸೇರಿದಂತೆ 73ಕಾಲೇಜುಗಳಲ್ಲಿ ಶೂನ್ಯೂ ಫಲಿತಾಂಶ ಬಂದಿತ್ತು. ಕಳೆದ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದರು. ಈ ಬಾರಿ ಉಡುಪಿ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ಎರಡನೇ ಸ್ಥಾನಕ್ಕೆ ಇಳಿದಂತಾಗಿದೆ.