ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಸಲೀಲೆ: ಮತ್ತೆ ನಿತ್ಯಾನಂದ ಜಾಮೀನು ಅರ್ಜಿ ವಜಾ (Nithyananda | Bidadi | Ranjitha | Karnataka | Tamil nadu)
Bookmark and Share Feedback Print
 
PTI
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಿ ನಿತ್ಯಾನಂದ ಸ್ವಾಮಿಯ ಜಾಮೀನು ಅರ್ಜಿಯನ್ನು ರಾಮನಗರ ಜಿಲ್ಲಾ ಸತ್ರ ನ್ಯಾಯಾಲಯ ಗುರುವಾರ ಮತ್ತೆ ವಜಾಗೊಳಿಸಿದೆ.

ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ವಂಚನೆ, ರಾಸಲೀಲೆ ಪ್ರಕರಣಗಳ ವಿಚಾರಣೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಈ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ, ಹಾಗಾಗಿ ಜಾಮೀನು ನೀಡುವಂತೆ ವಕೀಲರ ಮೂಲಕ ನಿತ್ಯಾನಂದ ಸ್ವಾಮಿ ಅರ್ಜಿ ಸಲ್ಲಿಸಿದ್ದ.

ಅರ್ಜಿಯ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಹುನಗುಂದ ಅವರು,ಸ್ವಾಮಿ ಸಾಕ್ಷ್ಯಾಧಾರ ನಾಶ ಮಾಡುವ ಹಿನ್ನೆಲೆಯಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಮಿ ಸ್ವಾಮಿ ನಿತ್ಯಾನಂದನ ಶಿಷ್ಯ ನಿತ್ಯ ಭಕ್ತಾನಂದನ ಜಾಮೀನು ಅರ್ಜಿಯನ್ನೂ ಕೂಡ ನ್ಯಾಯಾಲಯ ವಜಾಗೊಳಿಸಿದೆ.ಏತನ್ಮಧ್ಯೆ ವಂಚನೆ ಪ್ರಕರಣದಡಿ ಪಾಂಡಿಚೇರಿ ಜೆಎಂಎಫ್‌ಸಿ ನ್ಯಾಯಾಲಯ ಹೊರಡಿಸಿದ್ದ ವಾರೆಂಟ್ ಹಿಡಿದು ನಿತ್ಯಾನಂದ ವಶಕ್ಕೆ ತೆಗೆದುಕೊಳ್ಳಲು ಕಾಯುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ