ಬಹಿರಂಗ ಚರ್ಚೆಗೆ ಆಹ್ವಾನಿಸಿರುವ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾ.ಎಸ್.ಆರ್.ನಾಯಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ನಾಯಕ್ ಅವರ ಜತೆ ಮಾತನಾಡುವ ಧೈರ್ಯವೂ ಇಲ್ಲ. ಅವರಷ್ಟು ದೊಡ್ಡವರೂ ಅಲ್ಲ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡವರ ಸಹವಾಸವೇ ಬೇಡ. ನಾನು ನನ್ನ ಪಾಡಿಗೆ ಇದ್ದೇನೆ. ಅವರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.
ನಾಯಕ್ ತಮಗೆ ರಕ್ಷಣೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವ ವಿಷಯದ ಬಗ್ಗೆ ಯಾವುದೇ ಮಾಹಿತಿ ತಮಗಿಲ್ಲ. ಆದರೆ ಈ ವಿಚಾರದಲ್ಲಿ ಏನಾದರೂ ತಪ್ಪಾಗಿದ್ದರೆ ಎಲ್ಲವನ್ನು ಸರಿಪಡಿಸುವುದಾಗಿ ತಿಳಿಸಿದರು.
ಇದೇ ವೇಳೆ ಹಾಲಪ್ಪ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ನಾಯಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಐಡಿ ಪೊಲೀಸರ ಬಗ್ಗೆ ನನಗೆ ವಿಶ್ವಾಸವಿದೆ ಎಂದಷ್ಟೇ ಹೇಳಿದರು.