ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಏನು ಮಾಡಿದೆ?: ಕಾಲ್ಕಿತ್ತ ಶೋಭಾ ಕರಂದ್ಲಾಜೆ! (Shobha karandlaje | BJP | Bangalore | Congress | JDS)
Bookmark and Share Feedback Print
 
PR
ಕಳೆದ 60ವರ್ಷಗಳಿಂದ ಗ್ರಾಮಗಳಲ್ಲಿ ಅಭಿವೃದ್ಧಿ ಆಗಿಲ್ಲ, ಅಭಿವೃದ್ಧಿ ನೆಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಿ ಎಂದು ಮಾಜಿ ಸಚಿವೆ, ಶಾಸಕಿ ಶೋಭಾ ಕರಂದ್ಲಾಜೆ ಮತದಾರರಲ್ಲಿ ಮನವಿ ಮಾಡಿಕೊಂಡಾಗ ಆಕ್ರೋಶಿತಗೊಂಡ ಸಂದರ್ಭದಲ್ಲಿ ಸಾರ್ವಜನಿಕರು ಹಲವು ವರ್ಷಗಳಿಂದ ಬಿಜೆಪಿ ಶಾಸಕರು, ಸಂಸದರು ಆಯ್ಕೆಯಾಗಿದ್ದರೂ ಕೂಡ ಏನು ಮಾಡಲಿಲ್ಲ ಯಾಕೆ? ಎಂದು ತರಾಟೆಗೆ ತೆಗೆದುಕೊಂಡಾಗ ಸದ್ದಿಲ್ಲದೆ ಜಾಗ ಖಾಲಿ ಮಾಡಿದ ಘಟನೆ ಅಗರ ಗ್ರಾಮದಲ್ಲಿ ನಡೆದಿದೆ.

ಶನಿವಾರ ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ತಮ್ಮ ಕ್ಷೇತ್ರವ್ಯಾಪ್ತಿಯ ಅಗರ ಗ್ರಾಮದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಾಗ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿ ಶೋಭಾ ವಿರುದ್ಧ ಘೋಷಣೆ ಕೂಗಿದರು.

ಪಕ್ಷಕ್ಕಾಗಿ ಹಗಲಿರುಳು ದುಡಿದು ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ್ದೇವು, ಆದರೆ ನೀವು(ಶೋಭಾ) ಎರಡು ವರ್ಷಗಳ ನಂತರ ಗ್ರಾಮಕ್ಕೆ ಭೇಟಿ ನೀಡಿದ್ದೀರಿ. ಅಲ್ಲದೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಯಾವ ಆಶ್ವಾಸನೆಯನ್ನೂ ನೆರವೇರಿಸಿಲ್ಲ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಪರಶುರಾಮ್ ತರಾಟೆಗೆ ತೆಗೆದುಕೊಂಡರು.

ಸಾರ್ವಜನಿಕರ ಆಕ್ರೋಶ ಕಂಡ ಶೋಭಾ, ಕಳೆದ 60ವರ್ಷಗಳಿಂದ ಅಭಿವೃದ್ದಿಯಾಗಿಲ್ಲ ನಾನು ಮಾಡುತ್ತಿದ್ದೇನೆ ಎಂದು ಹೇಳಿದಾಗ, ಬಿಜೆಪಿಯ ಎಂ.ಶ್ರೀನಿವಾಸ್ ಶಾಸಕರಾಗಿ, ಸಂಸದರಾಗಿ ಆಯ್ಕೆಯಾಗಿದ್ದರು. ಅಶೋಕ್ ಮೂರು ಬಾರಿ ಶಾಸಕರಾಗಿದ್ದರು. ಅವರಿಬ್ಬರೂ ಏನೂ ಮಾಡಲಿಲ್ಲ. ನಿಮ್ಮದೇ ಪಕ್ಷದ ಶಾಸಕರಿದ್ದಾಗಲೂ ಅಭಿವೃದ್ದಿಯಾಗಿಲ್ಲ ಯಾಕೆ ಹೇಳಿ ಎಂದು ಸಾರ್ವಜನಿಕರು ಪಟ್ಟು ಹಿಡಿದಾಗ ಶೋಭಾ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಜಾಗ ಖಾಲಿ ಮಾಡಿದ್ದರು!
ಸಂಬಂಧಿತ ಮಾಹಿತಿ ಹುಡುಕಿ