ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ತಮ್ಮ ಹುದ್ದೆಯಿಂದ ವರ್ಗಾವಣೆ ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಯಂ ವರ್ಗಾವಣೆ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.
ಐಎಎಸ್ ಅಧಿಕಾರಿಯಾಗಿರುವ ಮೀನಾ ಕೇಂದ್ರದ ಸೇವೆಗೆ ತೆರಳಲು ಉತ್ಸುಕರಾಗಿದ್ದು, ಹಾಗಾಗಿ ತಮ್ಮನ್ನು ಈ ಹುದ್ದೆಯಿಂದ ತೆರವುಗೊಳಿಸುವಂತೆ ಕಳೆದ ಒಂದು ತಿಂಗಳ ಹಿಂದೆಯೇ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಬಿಎಂಪಿ ಚುನಾವಣೆ ವರೆಗೂ ಹುದ್ದೆಯಲ್ಲಿ ಮುಂದುವರಿಯುವಂತೆ ತಿಳಿಸಿದ್ದು, ಆ ಬಳಿಕ ಪರಿಶೀಲನೆ ಮಾಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಇದೀಗ ಚುನಾವಣೆ ಮುಗಿದು ಆಡಳಿತ ಕೈಗೆತ್ತಿಕೊಂಡು ಆಗಿದೆ. ಈಗಾಲಾದರೂ ತಮ್ಮ ಕೋರಿಕೆಯನ್ನು ಪರಿಗಣಿಸಿ ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಯವರಿಗೆ ಮೀನಾ ಒತ್ತಡ ಹೇರಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.