ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗ್ರಾಮ ಪಂಚಾಯತ್ ಮತದಾನ: ಹಲವೆಡೆ ಮಾರಾಮಾರಿ (Grama panchayath | Vote | Election | BJP | Congress)
Bookmark and Share Feedback Print
 
ಮತದಾನ ಬಹಿಷ್ಕಾರ, ಮರುಮತದಾನ, ಕೆಲಮತಗಟ್ಟೆಗಳಲ್ಲಿ ಮಾರಾಮಾರಿ ನಡುವೆಯೂ ಶನಿವಾರ ರಾಜ್ಯದ 16 ಜಿಲ್ಲೆಗಳಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಬಹುತೇಕ ಶಾಂತವಾಗಿ ನಡೆಯಿತು. ಒಟ್ಟು ಶೇ.70ರಷ್ಟು ಮತದಾನವಾಗಿರುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇಂದು 43, 791 ಗ್ರಾಮ ಪಂಚಾಯಿತಿಗಳಿಗೆ ನಡೆದ ಮೊದಲ ಹಂತದ ಚುನಾವಣೆಯಲ್ಲಿ 1,16, 764 ಅಭ್ಯರ್ಥಿಗಳ ರಾಜಕೀಯ ಭವಿಷ್ಯಕ್ಕೆ ಮತದಾರ ತನ್ನ ಮುದ್ರೆಯನ್ನು ಒತ್ತಿದ್ದಾನೆ.

ಕೆಲವಡೆ ಮಾರಾಮಾರಿ: ತುಮಕೂರು ನಾಗವಲ್ಲಿ ಗ್ರಾಮ ಪಂಚಾಯಿತಿ ಮತಗಟ್ಟೆಯಲ್ಲಿ ಎರಡು ಗುಂಪುಗಳ ನಡುವೆ ಹೊಯ್ ಕೈ ನಡೆದಿದೆ. ಈ ಸಂದರ್ಭದಲ್ಲಿ ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಆದರೆ ಆಕ್ರೋಶಿತಗೊಂಡ ಗ್ರಾಮಸ್ಥರು ಪೊಲೀಸ್ ಜೀಪ್ ಮೇಲೆ ಕಲ್ಲೆಸೆದ ಪರಿಣಾಮ ಜೀಪಿನ ಗಾಜು ಪುಡಿ, ಪುಡಿಯಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿ ಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯ ಚಿನ್ನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಅಧಿಕಾರಿ ಎದುರಲ್ಲೇ ಮಾರಾಮಾರಿ ನಡೆದಿದೆ. ಮತಹಾಕುವಂತೆ ಮತದಾರರಲ್ಲಿ ಒತ್ತಾಯಿಸುತ್ತಿದ್ದನ್ನು ಕಂಡು ಆಕ್ರೋಶಗೊಂಡ ಗ್ರಾ.ಪಂ. ಮಾಜಿ ಸದಸ್ಯ ರಾಧಾಕೃಷ್ಣ ಎಂಬವರು ರೈಲ್ವೆ ಪೇದೆ ವೆಂಕಟರಾಮ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದೀಗ ಹಲ್ಲೆಗೊಳಗಾದ ವೆಂಕಟರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತದಾನ ಸ್ಥಗಿತ: ರಾಮನಗರ ಬಾನಂದೂರು ಮತಗಟ್ಟೆಯಲ್ಲಿ ಅಭ್ಯರ್ಥಿಗಳ ಹೆಸರಿನ ಗೊಂದಲದಿಂದಾಗಿ ಗ್ರಾಮಸ್ಥರು ತೀವ್ರ ಆಕ್ರೋಶಗೊಂಡು ಮತದಾನ ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದಾರೆ. ಆ ನಿಟ್ಟಿನಲ್ಲಿ ಮತದಾನ ಪ್ರಕ್ರಿಯೆ ಸ್ಥಗಿತಗೊಂಡಿದ್ದರೆ, ಆಕ್ರೋಶಿತ ಗ್ರಾಮಸ್ಥರನ್ನು ಸಮಾಧಾನ ಪಡಿಸಲು ಪೊಲೀಸ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಈ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಕೆಲವಡೆ ಗೊಂದಲ ತುಮಕೂರು ಲಘು ಲಾಠಿ ಪ್ರಹಾರ ಪೊಲೀಸ್ ದಜೀಪ್ ಮೇಲೆ ಕಲ್ಲೆಸೆತ ನಾಗವಲ್ಲಿ, ಮತದಾನದ ವೇಳೆ ಗಲಾಟೆ. ಗುಂಪು ಚದುರಿಸಲು, ಎರಡು ಗುಂಪುಗಳ ನಡುವೆ ಹೊಡೆದಾಟ. ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆ. ಗಾಜು ಪುಡಿ, ಪುಡಿ ಮಾಡಿದ್ದರು.

ಕೊಪ್ಪಳ ಜಿಲ್ಲೆಯ ಕುಷ್ಠಗಿಯ ಮತಗಟ್ಟೆಯಲ್ಲೂ ಮತದಾನ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಚುನಾವಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡೂರು ಕರಪನಹಳ್ಳಿಯಲ್ಲಿ ಮತದಾನ ಸ್ಥಗಿತಗೊಂಡ ಘಟನೆ ವರದಿಯಾಗಿದೆ.

ಮತಪೆಟ್ಟಿಗೆಯೊಳಗೆ ವೋಟರ್ ಐಡಿ!: ಶಿವಮೊಗ್ಗದ ಹೊಸಹಳ್ಳಿ ಮತಗಟ್ಟೆಯಲ್ಲಿ ಮಹಿಳೆಯೊಬ್ಬರು ಮತಚಲಾಯಿಸುತ್ತಿದ್ದ ಸಂದರ್ಭದಲ್ಲಿ ಮತಪೆಟ್ಟಿಗೆಯೊಳಗೆ ವೋಟರ್ ಐಡಿ ಹಾಕಿ ಎಡವಟ್ಟು ಮಾಡಿದ ಘಟನೆಯೊಂದು ನಡೆದಿದೆ.

ಇನ್ನುಳಿದಂತೆ ಕೋಲಾರ, ದಾವಣಗೆರೆ, ಬೆಂಗಳೂರು ನಗರ, ಚಿತ್ರದುರ್ಗ, ಉಡುಪಿ, ಕಾರ್ಕಳ ತಾಲೂಕಿನಲ್ಲಿ ಮತದಾನ ಪ್ರಕ್ರಿಯೆ ಚುರುಕಗೊಂಡಿದ್ದು, ಶಾಂತ ರೀತಿಯಲ್ಲಿ ಮತದಾನ ನಡೆಯುತ್ತಿದೆ. ರಾಯಚೂರು ಜಿಲ್ಲೆಯಲ್ಲಿ ವರುಣನ ಅವಕೃಪೆಯಿಂದಾಗಿ ನಿಧಾನಗತಿಯಲ್ಲಿ ಮತದಾನ ನಡೆದಿತ್ತು.
ಸಂಬಂಧಿತ ಮಾಹಿತಿ ಹುಡುಕಿ