ಗ್ರಾಮ ಪಂಚಾಯಿತಿ ಎರಡನೇ ಹಂತದ ಚುನಾವಣೆಯ ಮತದಾನ ಮುಗಿದ ಬಳಿಕ ಮಾಜಿ ಸಚಿವ ಹರತಾಳ ಹಾಲಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲು ಬಿಜೆಪಿ ನಿರ್ಧರಿಸಿರುವುದಾಗಿ ರಾಜಕೀಯ ವಲಯದಲ್ಲಿ ಕೇಳಿ ಬರತೊಡಗಿದೆ.
ಅತ್ಯಚಾರ ಆರೋಪ ಎದುರಿಸುತ್ತಿರುವ ಹಾಲಪ್ಪ ಅವರನ್ನು ಪಕ್ಷದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಮುಂಬರುವ ಚುನಾವಣೆಯಲ್ಲಿ ಪರಿಣಾಮ ಬೀರಬಹುದೆಂಬ ನಿಟ್ಟಿನಲ್ಲಿ ಅಮಾನತು ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಎರಡನೇ ಹಂತದ ಚುನಾವಣೆ ಮೇ 12ರಂದು ನಡೆಯಲಿದೆ. ಈ ಚುನಾವಣೆ ಮುಗಿದ ಬಳಿಕ ಹಾಲಪ್ಪ ಅವರನ್ನು ಪಕ್ಷದಿಂದ ಅಮಾನತುಪಡಿಸುವ ಮೂಲಕ ವಿರೋಧ ಪಕ್ಷಗಳ ಟೀಕೆ ನಿಲ್ಲಿಸಲು ಮುಂದಾಗಿದೆ.
ಒಬ್ಬ ಜನಪ್ರತಿನಿಧಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಐಡಿ ವಶದಲ್ಲಿರುವ ಕಳಂಕಿತ ವ್ಯಕ್ತಿಯನ್ನು ಪಕ್ಷದಲ್ಲಿ ಮುಂದುವರಿಸಿದರೆ ಪಕ್ಷಕ್ಕೆ ಭಾರಿ ಹಿನ್ನೆಡೆಯಾಗಬಹುದೆಂಬ ದೃಷ್ಟಿಯಲ್ಲಿ ಈ ತಿರ್ಮಾನ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.