ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗ್ರಾ.ಪಂ ಅಖಾಡ:ಬುಧವಾರ ಕೊನೆ ಹಂತದ ಮತದಾನ (Gram panchayat polls | BJP | congress | yeddyurappa | belgaum | election)
Bookmark and Share Feedback Print
 
ಚಾಮರಾಜನಗರ, ಹಾಸನ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಬೆಳಗಾವಿ, ಬಿಜಾಪುರ ಸೇರಿದಂತೆ 15 ಜಿಲ್ಲೆಗಳ 2833 ಗ್ರಾಮ ಪಂಚಾಯಿತಿ ಚುನಾವಣೆಯ ಎರಡನೇ ಹಂತದ ಮತದಾನ ಬುಧವಾರ ಬೆಳಿಗ್ಗೆ ನಡೆಯಲಿದೆ.

ನಾಳೆ ಬೆಳಿಗ್ಗೆ 7 - 5ಗಂಟೆವರೆಗೆ ನಡೆಯಲಿರುವ ಎರಡನೇ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಯ ಮತದಾನ ನಡೆಯಲಿದೆ. ಅದಕ್ಕಾಗಿ ಜಿಲ್ಲಾಡಳಿತ ಸಜ್ಜಾಗಿದ್ದು, ಶಾಂತಿಯುತ ಮತದಾನ ನಡೆಸಲು ಅಗತ್ಯ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ.

44, 223 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಗಾಗಿ 16064 ಮತಗಟ್ಟೆಗಳಿದ್ದು, 4539 ಸೂಕ್ಷ್ಮ ಹಾಗೂ 3226 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಇಬ್ಬರು ಕಾನ್ಸ್‌ಟೇಬಲ್, ಒಬ್ಬರು ಹೆಡ್ ಕಾನ್ಸ್‌ಟೇಬಲ್ ಅನ್ನು ನಿಯೋಜಿಸಲಾಗಿದೆ. ಸೂಕ್ಷ್ಮ ಮತಗಟ್ಟೆಗಳಿಗೆ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ನಿಯೋಜಿಸಲಾಗಿದೆ.

ಅಲ್ಲದೇ ನಕ್ಸಲ್ ಪೀಡಿತ ಪ್ರದೇಶಗಳಾದ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಕುಂದಾಪುರ ತಾಲೂಕುಗಳಲ್ಲಿ ವಿಶೇಷ ಭದ್ರತೆ ಒದಗಿಸಲಾಗಿದೆ.

ಹಣ, ಹೆಂಡ, ಹಂಚಿಕೆ: ಒಟ್ಟಾರೆ ಲೋಕಸಭೆ, ವಿಧಾನಸಭೆ ಚುನಾವಣೆಗಳಂತೆಯೇ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲ್ಲಲು ಅಭ್ಯರ್ಥಿಗಳು ಮತದಾರರಿಗೆ ಹಣ, ಹೆಂಡದ ಆಮೀಷ ಒಡ್ಡುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿಯೂ ಲಕ್ಷಾಂತರ ರೂಪಾಯಿ ವ್ಯಯಿಸುತ್ತಿರುವುದು ಈ ಬಾರಿಯ ಚುನಾವಣೆಯ ಮತ್ತೊಂದು ದುರಂತವಾಗಿದೆ!

ಅದಕ್ಕಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮತದಾರರ ಒಲೈಕೆಗಾಗಿ ಹಣ, ಹೆಂಡದ ಹಂಚಿಕೆಯಲ್ಲಿ ತೊಡಗಿದೆ. ಈಗಾಗಲೇ ನಕಲಿ ಮದ್ಯ ಪೂರೈಸಿ ಹಲವಾರು ಮಂದಿ ಸಾವನ್ನಪ್ಪಿರುವ ಘಟನೆಯೂ ನಡೆದಿದೆ.
ಸಂಬಂಧಿತ ಮಾಹಿತಿ ಹುಡುಕಿ