ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ನೇರ ಸ್ಪರ್ಧೆಗೆ ಹಿಂಜರಿಯುತ್ತಿದೆ: ಮೋಟಮ್ಮ (Congress | Motamma | BJP | JDS | BBMP | Yeddyurappa)
Bookmark and Share Feedback Print
 
ಬಿಜೆಪಿ ಸರ್ಕಾರ ಕೇವಲ ಆಪರೇಷನ್ ಕಮಲದಲ್ಲಿಯೇ ಆಡಳಿತ ನಡೆಸುತ್ತಿದೆ ವಿನಃ ನೇರ ಸ್ಪರ್ಧೆಗಿಳಿಯಲು ಹಿಂಜರಿಯುತ್ತಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಮತ್ತು ಮೂಡಿಗೆಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರ ಹಿಡಿಯುವ ಮೂಲಕ ನೇರ ಸ್ಪರ್ಧೆಗೆ ಹಿಂಜರಿದಿರುವುದು ಸಾಬೀತುಪಡಿಸಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ಅಧಿಕಾರ ಬಂದ ಬಳಿಕ ಶಾಸಕರು ಆರೋಪಿ ಸ್ಥಾನದಲ್ಲಿ ನಿಲ್ಲುವಂತಾಗಿದೆ. ಮುಖ್ಯವಾಗಿ ಬಿಜೆಪಿ ಸಚಿವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣವೇ ಸಾಕ್ಷಿಯಾಗಿದೆ ಎಂದರು.

ಅಲ್ಲದೆ, ಆರೋಪಿಗಳಿಂದ ರಕ್ಷಿಸಿಕೊಳ್ಳಲು ಜನರ ದಿಕ್ಕನ್ನು ಬದಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಇದು ಬಿಜೆಪಿಗೆ ಶೋಭೆ ತರುವಂತದ್ದಲ್ಲ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಹಲವಾರು ಯೋಜನೆಗಾಗಿ ಸಾವಿರಾರು ಕೋಟಿ ರೂ. ನೀಡುತ್ತಿದೆ. ಆದರೂ ಬಿಜೆಪಿ ಅದನ್ನು ಸಮರ್ಪಕವಾಗಿ ಬಳಸುವಲ್ಲಿ ವಿಫಲವಾಗಿದೆ ಎಂದು ಅವರು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ