ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನುಂಗಣ್ಣಗಳಿದ್ದಾರೆ ಎಚ್ಚರ: ಪಾಲಿಕೆ ಸದಸ್ಯರಿಗೆ ಸಿಎಂ (BJP | Yeddyurappa | BBMP | Bangalore | Congrss | JDS)
Bookmark and Share Feedback Print
 
ನಗರವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು, ಅಲ್ಲದೇ ಅಭಿವೃದ್ಧಿಯೇ ನಮ್ಮ ಮುಖ್ಯ ಗುರಿಯಾಗಿರಬೇಕು. ಆದರೆ ಗುತ್ತಿಗೆದಾರರು, ಅಧಿಕಾರಿಗಳು, ರಾಜಕಾರಣಿಗಳು ಕಾಮಗಾರಿಗಳಿಗೆ ಮಂಜೂರಾದ ಹಣವನ್ನು ಹೇಗೆ ನುಂಗಬೇಕು ಎಂಬ ಆಲೋಚನೆಯಲ್ಲಿರುತ್ತಾರೆ. ಆ ನಿಟ್ಟಿನಲ್ಲಿ ಪಾಲಿಕೆ ಸದಸ್ಯರು ಕಣ್ಗಾವಲಿನಂತೆ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಪಾಲಿಕೆಗೆ ನೂತನವಾಗಿ ಆಯ್ಕೆಯಾಗಿರುವ 198 ಸದಸ್ಯರುಗಳಿಗೆ ಏರ್ಪಡಿಸಿದ್ದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿ ವಿಷಯದಲ್ಲಿ ಪ್ತತಿ ವಾರ್ಡ್ ಅಭಿವೃದ್ದಿಗೂ ಹೆಚ್ಚು ಆದ್ಯತೆ ನೀಡಬೇಕು ಎಂದರು.

ಅಭಿವೃದ್ಧಿ ಎಂಬುದು ಸ್ವಂತ ಕೆಲಸವಲ್ಲ, ಪ್ರತಿಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೆಂಗಳೂರು ನಗರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ಅಲ್ಲದೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷ ಎಂಬ ಬೇಧ ಭಾವ ಮಾಡದೆ ಎಲ್ಲ 198 ವಾರ್ಡ್‌ಗಳ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಆಡಳಿತದಲ್ಲಿ ಎರಡು ಚಕ್ರವಿದ್ದಂತೆ, ಇಬ್ಬರೂ ಒಟ್ಟಾಗಿ ಕೆಲಸ ಮಾಡಿಕೊಂಡು ಹೋದಲ್ಲಿ ಜನತೆಯ ಅಪೇಕ್ಷೆ, ನಿರೀಕ್ಷೆಗೆ ತಕ್ಕಂತೆ ನಗರದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವೆಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ