ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತೀವ್ರ ಎದೆನೋವು; ಹಾಲಪ್ಪ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ (Halappa | Rape case | Vicotriya hospital | Meggon | BJP)
Bookmark and Share Feedback Print
 
NRB
ಅತ್ಯಾಚಾರ ಪ್ರಕರಣದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹರತಾಳು ಹಾಲಪ್ಪ ಎದೆನೋವಿನಿಂದ ಬಳಲುತ್ತಿದ್ದು, ಅವರನ್ನು ಶುಕ್ರವಾರ ಹೆಚ್ಚಿನ ಚಿಕಿತ್ಸೆಗಾಗಿ ನಗರಕ್ಕೆ ಕರೆ ತರಲಾಯಿತು.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಇಂದು ಬೆಳಿಗ್ಗೆ ಆಂಬ್ಯುಲೆನ್ಸ್‌ನಲ್ಲಿ ಎಸ್ಕಾರ್ಟ್ ವಾಹನಗಳ ಭದ್ರತೆಯೊಂದಿಗೆ ಮಧ್ಯಾಹ್ನ ನಗರಕ್ಕೆ ಕರೆತಂದು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಕಾರಾಗೃಹದಲ್ಲಿ ಡಾ.ಕುಮಾರ್ ಅವರು ಹಾಲಪ್ಪನ ಆರೋಗ್ಯ ತಪಾಸಣೆ ನಡೆಸಿ ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು.

ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್: ಪರಪ್ಪನ ಅಗ್ರಹಾರದಿಂದ ಹಾಲಪ್ಪ ಅವರನ್ನು ವಿಶೇಷ ಭದ್ರತೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯ 2ನೇ ಮಹಡಿಯ ವಿಶೇಷ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ವಿಭಾಗದ ಮುಖ್ಯಸ್ಥರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಹಾಲಪ್ಪ ಕರೆತರುವ ವೇಳೆ ಘರ್ಷಣೆ: ಹಾಲಪ್ಪ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ಕರೆ ತರುವ ವೇಳೆ ಹಾಲಪ್ಪ ಬೆಂಬಲಿಗರು ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಮಾತಿನ ಚಕಮಕಿಯೊಂದಿಗೆ ಘರ್ಷಣೆ ನಡೆಯಿತು. ಹಾಲಪ್ಪ ಅವರನ್ನು ಕರೆದೊಯ್ಯುವ ದೃಶ್ಯದ ಚಿತ್ರೀಕರಣಕ್ಕೆ ಬೆಂಬಲಿಗರು ಅಡ್ಡಿಪಡಿಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸಿದಾಗ ಘರ್ಷಣೆ ನಡೆಯಿತು, ಈ ಸಂದರ್ಭದಲ್ಲಿ ಹಲವರು ಗಾಯಗೊಂಡಿರುವ ಘಟನೆಯೂ ನಡೆಯಿತು.
ಸಂಬಂಧಿತ ಮಾಹಿತಿ ಹುಡುಕಿ