ಖಾಸಗಿ ವಾಹಿನಿಗಳ ರಸಹ್ಯ ಕಾರ್ಯಾಚರಣೆಯಲ್ಲಿ ಸಮಾಜದಲ್ಲಿ ಗಲಭೆ ಸೃಷ್ಟಿಸಲು ಹಣ ಪಡೆಯುತ್ತಿರುವ ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಇಂತಹ ದೇಶದ್ರೋಹಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮಸೇನೆ ಮುಖಂಡ ಮುತಾಲಿಕ್ ಮುಖವಾಡ ಬಯಲಾಗಿದೆ. ಹಣ ಪಡೆದು ಗಲಭೆ ಸೃಷ್ಟಿಸಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಇಂತಹವರನ್ನು ಕೂಡಲೇ ಬಂಧಿಸಬೇಕು, ಅಲ್ಲದೇ ಸಂಘಟನೆಯ ಕಾರ್ಯಕರ್ತರನ್ನು ಜೈಲಿಗೆ ಅಟ್ಟಬೇಕು ಎಂದು ಆಗ್ರಹಿಸಿದರು.
ಮೈಸೂರಿನಲ್ಲಿ ನಡೆದ ಕೋಮುಗಲಭೆಯಲ್ಲೂ ಮುತಾಲಿಕ್ ಕೈವಾಡವಿದೆ ಎಂದು ಆರೋಪಿಸಿದ ಅವರು, ಮುತಾಲಿಕ್‌ನ ಕೃತ್ಯಗಳಿಗೆ ಸರ್ಕಾರದ ಕುಮ್ಮಕ್ಕು ಇದೆ ಎಂದು ದೂರಿದ ಸಿದ್ದರಾಮಯ್ಯ, ಮುತಾಲಿಕ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ನಮಗೆ ವಿಶ್ವಾಸವಿಲ್ಲ ಎಂದರು.
ಕೋಮುಗಲಭೆ ಸೃಷ್ಟಿ ಮಾಡುವ ಮುತಾಲಿಕ್ ನಿಜಬಣ್ಣ ರಹಸ್ಯ ಕಾರ್ಯಾಚರಣೆಯಿಂದ ಸಾಬೀತಾಗಿದೆ ಎಂದು ಹೇಳಿದರು. ಧರ್ಮ, ದೇವರ ಹೆಸರಿನಲ್ಲಿ ವಂಚನೆಗಿಳಿದವ ಇಂತಹವರನ್ನು ಬಗ್ಗೆ ಜನಸಾಮಾನ್ಯರು ಎಚ್ಚರದಿಂದ ಇರಬೇಕೆಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.