ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕನ್ನಡದ ಅಭಿವೃದ್ದಿಗೆ ಬದ್ಧ: ಯಡಿಯೂರಪ್ಪ ಭರವಸೆ (BJP | Yeddyurappa | Bangalore | Congress | JDS)
Bookmark and Share Feedback Print
 
ಕನ್ನಡದ ನೆಲ, ಜಲ ವಿಷಯದಲ್ಲಿ ಏನೇ ತೊಂದರೆ ಎದುರಾದರೂ ಎದುರಿಸಲು ಸರ್ಕಾರ ಸಿದ್ಧವಿದೆ ಎಂದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕನ್ನಡದ ಅಭಿವೃದ್ದಿಗಾಗಿ ಕಂಕಣ ತೊಟ್ಟಿರುವ ಸರ್ಕಾರ ನಮ್ಮದಾಗಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಕಾರ್ಮಿಕರಿಗೆ ಕನ್ನಡ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ನಗರದಲ್ಲಿ ಅನ್ಯಭಾಷಿಕರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವಾಗ ಇಂತಹ ಸಮಾವೇಶದ ಅಗತ್ಯ ಹಿಂದಿಗಿಂತಲೂ ಹೆಚ್ಚಿದೆ. ಈ ನಿಟ್ಟಿನಲ್ಲಿ ಕನ್ನಡದ ವಾತಾವರಣವನ್ನು ರೂಪಿಸಲು ಸರ್ಕಾರ ಎಲ್ಲಾ ರೀತಿಯ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದರು.

ಇದೇ ವೇಳೆ ಮಾತನಾಡಿದ ಮೇಯರ್ ಎಸ್.ಕೆ.ನಟರಾಜ್, ನಗರದ ಎಲ್ಲಾ ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಕನ್ನಡದಲ್ಲೇ ಇರುವಂತೆ ಮಾಡಲು ಕನ್ನಡ ಅಭಿವೃದ್ದಿ ಪ್ರಾಧಿಕಾರ ಹಮ್ಮಿಕೊಂಡಿರುವ ಜಾಥಾದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ.

ಇಂದು ಆಂಧ್ರದ ರಾಜಧಾನಿಯಾಗಿರುವ ಹೈದರಾಬಾದ್ ಸಂಪೂರ್ಣ ಹಿಂದಿಮಯವಾಗಿದೆ. ಅದರಂತೆ ಬೆಂಗಳೂರು ಆಗುವುದಕ್ಕೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ