ವಿಧಾನಮಂಡಲ ಅಧಿವೇಶನ ಜೂನ್ 24ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನಕ್ಕೂ ಮುನ್ನ ಜೂನ್ 18ರಂದು ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ನಡೆಸಿ, ಜೂನ್ 19ರಂದು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾಗಿರುವ ಬಿಜೆಪಿ ಬೆಂಬಲಿತ ಸದಸ್ಯರ ಸಮಾವೇಶ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಸರ್ಕಾರ ಏನೆಲ್ಲಾ ಸಾಧನೆ ಮಾಡಿದೆ. ಎಲ್ಲೆಲ್ಲಿ ಲೋಪ ನಡೆದಿವೆ ಮತ್ತು ಸರಿಪಡಿಸಿಕೊಳ್ಳುವುದು ಹೇಗೆಂಬ ಕುರಿತಂತೆ ಸಂಘ ಪರಿವಾರದೊಂದಿಗೆ ಮಾತುಕತೆ ನಡೆಸಿ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದರು.
ಜೊತೆಗೆ ಉಳಿದ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರದ ಮುಂದಿರುವ ಸವಾಲುಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಇದರಂತೆ ಮುಂದಿನ 3 ವರ್ಷಗಳಲ್ಲಿ 5 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.