ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೋಮುಗಲಭೆ ಸೃಷ್ಟಿಗೆ 60 ಲಕ್ಷ ರೂ. ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಒಂದೆಡೆ ಕಠಿಣ ಕ್ರಮಕ್ಕೆ ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ಈ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪ ಕುರಿತಂತೆರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡುವುದಿಲ್ಲ ಎಂದಿದ್ದು, ತಪ್ಪಿತಸ್ಥರು ಎಂದು ಸಾಬೀತಾದದಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಅಥವಾ ಕೋರ್ಟ್ ಸ್ವತಂತ್ರವಾಗಿ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಕೇಳಲಾದ ಪ್ರಶ್ನೆಗೆ ಸಂಪುಟದ ಪುನಾರಚನೆ ವಿಷಯದಲ್ಲಿ ಇಷ್ಟರವರೆಗೆ ಯಾವುದೇ ಚರ್ಚೆ ನಡೆದಿಲ್ಲ. ಸದ್ಯ ನಮ್ಮ ಗಮನ ಬೆಂಗಳೂರಿನಲ್ಲಿ ನಡೆಯುವ ವಿಶ್ವ ಹೂಡಿಕೆದಾರರ ಸಮಾವೇಶದತ್ತ ಮಾತ್ರ ಕೇಂದ್ರೀಕೃತವಾಗಿದೆ ಎಂದು ತಿಳಿಸಿದರು.
ರಾಜ್ಯ ಸರಕಾರದ ಎರಡನೇ ವರ್ಷದ ಸಾಧನಾ ಸಮಾವೇಶ ಜೂ.19ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಅದರ ಮರುದಿನ ಬೆಂಗಳೂರಿನಲ್ಲಿ ಗ್ರಾಮ ಪಂಚಾಯತ್‌ಗೆ ಆಯ್ಕೆಯಾದ ಸದಸ್ಯರಿಗೆ ತರಬೇತಿ ನಡೆಯಲಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.