ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯಪಾಲರು ರಬ್ಬರ್ ಸ್ಟ್ಯಾಂಪ್ ಅಲ್ಲ: ವೀರಪ್ಪ ಮೊಯಿಲಿ (Veerappa moily | Bharadwaj | Bangalore | Congress | Janardana Reddy)
Bookmark and Share Feedback Print
 
ರಾಜ್ಯಪಾಲ ಭಾರದ್ವಾಜ್ ಅವರು ಸಚಿವ ಜನಾರ್ದನ ರೆಡ್ಡಿ ವಿರುದ್ಧ ಸಂವಿಧಾನ ಬದ್ಧವಾಗಿಯೇ ನಡೆದುಕೊಂಡಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯಿಲಿ ಹೇಳಿಕೆ ನೀಡಿ, ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ಬಸವ ಸಮಿತಿ ವತಿಯಿಂದ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜ್ಯಪಾಲರು ನೋಟಿಸ್ ಜಾರಿ ಮಾಡಿ ಸರಿಯಾದ ಕ್ರಮವನ್ನೇ ಕೈಗೊಂಡಿದ್ದಾರೆ. ರಾಜ್ಯಪಾಲರ ಹುದ್ದೆ ಬರೇ ರಬ್ಬರ್ ಸ್ಟ್ಯಾಂಪ್ ಅಲ್ಲ, ವಿವರ ಕೇಳುವ ಅಧಿಕಾರ ಅವರಿಗಿದೆ ಎಂದರು.

ಈ ರೀತಿ ಹಿಂದಿನ ರಾಜ್ಯಪಾಲರು ಕಾರ್ಯನಿರ್ವಹಿಸದಿದ್ದರೆ ಅದು ಅವರ ತಪ್ಪು. ಹೀಗಾಗಿ ರಾಜ್ಯಪಾಲರ ಕ್ರಮದ ಬಗ್ಗೆ ಮಾತನಾಡುವುದು ಸಂವಿಧಾನ ವಿರೋಧವಾಗಲಿದೆ ಎಂದು ಎಚ್ಚರಿಸಿದರು. ರಾಜ್ಯ ಸರ್ಕಾರವಾಗಲಿ, ಮಂತ್ರಿಗಳಾಗಲಿ ರಾಜ್ಯಪಾಲರ ಬಗ್ಗೆ ಪ್ರಶ್ನೆ ಮಾಡುವುದಾಗಲಿ, ಅವರೊಂದಿಗೆ ಸಂಘರ್ಷಕ್ಕಿಳಿಯುವುದಾಗಲಿ ಮಾಡಬಾರದು ಎಂದು ಸಲಹೆ ನೀಡಿದ ಮೊಯಿಲಿ, ಹಾಗೊಂದು ವೇಳೆ ಮಾಡಿದರೆ ಅದು ಸಂವಿಧಾನ ವಿರೋಧಿ ಕ್ರಮ ಎಂದರು.

ರಾಜ್ಯಪಾಲರು ನೋಟಿಸ್ ಜಾರಿ ಮಾಡದೆ, ಬಂದ ದೂರನ್ನು ಚುನಾವಣಾ ಆಯೋಗಕ್ಕೆ ಕಳುಹಿಸಬಹುದಿತ್ತು. ಆದರೆ ಅವರ ಸೌಜನ್ಯ, ನೋಟಿಸ್ ನೀಡಿ ವಿವರ ಕೇಳಿದ್ದಾರೆ. ರಾಜ್ಯಪಾಲರ ಪ್ರಶ್ನೆಗೆ ಸಚಿವ ರೆಡ್ಡಿ ಉತ್ತರ ನೀಡಬಹುದಿತ್ತಲ್ಲ ಅದರಲ್ಲಿ ತೊಂದರೆ ಏನಿದೆ ಎಂದು ಅವರು ಪ್ರಶ್ನಿಸಿದರು.
ಸಂಬಂಧಿತ ಮಾಹಿತಿ ಹುಡುಕಿ