ರಾಜ್ಯ ಸರ್ಕಾರ ಒಂಬತ್ತು ಮಂದಿ ಐಎಫ್‌ಎಸ್‌ನ ಒಂಬತ್ತು ಅಧಿಕಾರಿಗಳನ್ನು ಕೆಳಕಂಡ ಸ್ಥಳಗಳಿಗೆ ವರ್ಗಾಯಿಸಿ ಸೋಮವಾರ ಆದೇಶ ಹೊರಡಿಸಿದೆ.
ತುಮಕೂರು ಜಿಲ್ಲಾ ಪಂಚಾಯಿತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಡಾ.ಆರ್.ರಾಜು ಅವರನ್ನು ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಎಸ್.ವೆಂಕಟೇಶನ್, ಚಿಕ್ಕಮಗಳೂರಿನ ಭದ್ರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಎಸ್.ಎಸ್.ಲಿಂಗರಾಜು.
ಮನೋಜ್ ಕುಮಾರ್ ತ್ರಿಪಾಠಿ ಅವರನ್ನು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಪಿ.ಬಿ.ಕರುಣಾಕರ್ ಅವರನ್ನು ಯಲ್ಲಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಡಿ.ಎಸ್.ಗಾಂವ್‌ಕರ್ ಅವರಿಗೆ ಈಗಿರುವ ಹುದ್ದೆಯ ಜೊತೆಗೆ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್‌ನ ಮಾನವ ಸಂಪನ್ಮೂಲ ವಿಭಾಗದ ವ್ಯವಸ್ಥಾಪಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಅದೇ ರೀತಿ ರವಿಶಂಕರ್ ಅವರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮದ ಪರಿಸರ ಅಧಿಕಾರಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಬಿ.ವೆಂಕಟೇಶ್ ಅವರನ್ನು ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಹಾಗೂ ಚಿಕ್ಕಬಳ್ಳಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ವಿ.ಜಯರಾಮೇಗೌಡ ಅವರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.