ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಡಿಎನ್ಎ ಪರೀಕ್ಷೆಗೆ ಒಲ್ಲೆ ಎಂದ ಹರತಾಳು ಹಾಲಪ್ಪ (DNA | Halappa | BJP | Bangalore | Yeddyurappa)
Bookmark and Share Feedback Print
 
ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಡಿಎನ್ಎ ಪರೀಕ್ಷೆ ಬೇಡವೆಂದು ತಿಳಿಸಿದ್ದು, ಈ ಬಗ್ಗೆ ಶಿವಮೊಗ್ಗದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಇದೀಗ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಲಪ್ಪ ಅವರಿಗೆ ಡಿಎನ್ಎ ಪರೀಕ್ಷೆ ನಡೆಸಿ ಅತ್ಯಚಾರ ಆರೋಪ ಪ್ರಕರಣದ ಸಾಕ್ಷ್ಯವಾಗಿ ಪರಿಗಣಿಸಲು ಸಿಐಡಿ ಪೊಲೀಸರು ಮುಂದಾಗಿದ್ದಾರೆ. ಆದರೆ ಇದನ್ನು ತಿರಸ್ಕರಿಸಿರುವ ಹಾಲಪ್ಪ ತಕರಾರು ಅರ್ಜಿ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ.

ಈ ಮಧ್ಯೆ ಹಾಲಪ್ಪ ರಕ್ತ ಪರೀಕ್ಷೆ ನಡೆಸದಂತೆ ನ್ಯಾಯಾಲದಲ್ಲಿ ಕೋರಲಾಗಿದೆ. ಆದರ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಜೆಎಂಎಫ್‌ಸಿ ನ್ಯಾಯಾಲಯ ವಿಚಾರಣೆಯನ್ನು 18ಕ್ಕೆ ಮುಂದೂಡಿದ್ದು, ಇದರ ನಡುವಬೆ ಹಾಲಪ್ಪ ವಕೀಲರು ಡಿಎನ್ಎ ಪರೀಕ್ಷೆ ಕುರಿತಂತೆ ಸಲ್ಲಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ