ಹೊಗೇನಕಲ್ ನೀರಾವರಿ ಯೋಜನೆಯ ವಿವಾದದ ಮುಸುಕಿನ ಗುದ್ದಾಟ ಮುಂದುವರಿದಿದ್ದು, ಹೊಗೇನಕಲ್ ಯೋಜನೆ ಕಾಮಗಾರಿ ನಡೆಯುತ್ತಿರುವ ಸ್ಥಳ ಪೂರ್ಣವಾಗಿ ತಮಿಳುನಾಡಿಗೇ ಸೇರಿದೆ ಎಂದು ಉಪಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತೊಂದು ಕ್ಯಾತೆ ತೆಗೆದಿದ್ದಾರೆ.
ಕರ್ನಾಟಕ ಸರ್ಕಾರ ಹಾಗೂ ಕೆಲ ರಾಜಕೀಯ ಪಕ್ಷಗಳು ಈ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ನಡೆಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ಹೊಗೇನಕಲ್ ಯೋಜನೆಯನ್ನು ತಮಿಳುನಾಡು ಸರ್ಕಾರ ರಾಜ್ಯದ ಗಡಿ ವ್ಯಾಪ್ತಿಯಲ್ಲಿಯೇ ಕೈಗೊಂಡಿದೆ. ಇದರಲ್ಲಿ ಯಾವುದೇ ಗಡಿ ಉಲ್ಲಂಘನೆಯಾಗಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಕರ್ನಾಟಕ ಮತ್ತು ತಮಿಳುನಾಡು ಗಡಿಭಾಗದಲ್ಲಿನ ಹೊಗೇನಕಲ್ ನೀರಾವರಿ ಯೋಜನೆಯಲ್ಲಿ ತಮಿಳುನಾಡು ಸರ್ಕಾರ ಮೂಲ ಒಪ್ಪಂದವನ್ನೇ ಉಲ್ಲಂಘಿಸಿ ಭರದಿಂದ ಕಾಮಗಾರಿ ನಡೆಸುತ್ತಿದ್ದು, ಇದಕ್ಕೆ ರಾಜ್ಯ ಸರ್ಕಾರ ನೆರೆಯ ತಮಿಳುನಾಡಿನೊಂದೆಗೆ ಮಾತುಕತೆ ನಡೆಸುವುದಾಗಿ ಹೇಳಿತ್ತು. ಆದರೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆಯಿಂದಾಗಿ ತಮಿಳುನಾಡು ಅತ್ತ ನಿಗದಿತ ಅವಧಿಯೊಳಗೆ ಯೋಜನೆ ಪೂರ್ಣಗೊಳಿಸುತ್ತ ಚಿತ್ತ ಹರಿಸಿದೆ.