ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗವರ್ನರ್, ಲೋಕಾಯುಕ್ತ ವಿರುದ್ಧ ಟೀಕೆ ಬೇಡ: ಸಿಎಂ (Yeddyurappa | Lokayuktha | BJP | Congress | Bharadwaj)
Bookmark and Share Feedback Print
 
ರಾಜ್ಯಪಾಲರು ಹಾಗೂ ಲೋಕಾಯುಕ್ತರ ಗೌರವಕ್ಕೆ ಚ್ಯುತಿ ತರುವ ಕೆಲಸ ಮಾಡಬೇಡಿ ಎಂದು ಪಕ್ಷದ ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಶಿಕಾರಿಪುರ ಪಟ್ಟಣಕ್ಕೆ ಬುಧವಾರ ಆಗಮಿಸಿದ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ರಾಜ್ಯಪಾಲರು, ಲೋಕಾಯುಕ್ತರ ಬಗ್ಗೆ ಚರ್ಚೆ ಬೇಡ ಎಂದು ಹೇಳಿದ್ದಾರೆ.

ಅಲ್ಲದೇ ಹೊಗೇನಕಲ್ ವಿವಾದ ಸಂಬಂಧ ಕರ್ನಾಟಕ ಮತ್ತು ತಮಿಳುನಾಡು ಕಾರ್ಯದರ್ಶಿಗಳ ನಡುವೆ ಮಾತುಕತೆ ನಡೆಯುತ್ತಿದ್ದು, ಇಲ್ಲಿ ಸ್ಪಷ್ಟ ತೀರ್ಮಾನ ಹೊರ ಬಂದ ನಂತರ ಮುಂದಿನ ಕ್ರಮದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಬಿತ್ತನೆ ಬೀಜ, ಗೊಬ್ಬರದ ಅಭಾವವಿಲ್ಲ, ಸಾಕಷ್ಟು ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದರು. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 5ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ