ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿವಿಯಲ್ಲಿ ರಾಜಕೀಯ ಸಹಿಸುವುದಿಲ್ಲ: ಭಾರದ್ವಾಜ್ (Mangalore | Mysore | Bharadwaj | Congress | BJP)
Bookmark and Share Feedback Print
 
ರಾಜ್ಯದ ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ಗಳಲ್ಲಿ ರಾಜಕೀಯದ ರೋಗ ಬಡಿದಿದ್ದು, ಅದನ್ನು ತಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಗುಡುಗಿದ್ದಾರೆ.

ಮೈಸೂರಿನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಅವರು `ವಿವಿ ಆಡಳಿತದಲ್ಲಿ ಸಿಂಡಿಕೇಟ್ ಸದಸ್ಯರ ರಾಜಕೀಯ ವರ್ತನೆ ವೈರಸ್‌ನಂತೆ ಹೆಚ್ಚಾಗುತ್ತಿದೆ. ಇದು ಸರಿಯಲ್ಲ. ಇದನ್ನು ಕೊನೆಗಾಣಿಸಲೇ ಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ವಿವಿಗಳಿಗೆ ನೇಮಕಗೊಂಡಿರುವ ಕೆಲ ಸಿಂಡಿಕೇಟ್ ಸದಸ್ಯರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾ, ವಿವಿಯ ವಾತಾವರಣವನ್ನು ರಾಜಕೀಕರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು. ನಾನು ಯಾವುದೇ ವಿವಿ ಆಡಳಿತಲ್ಲಿಯೂ ಹಸ್ತಕ್ಷೇಪ ಮಾಡುವುದಿಲ್ಲ. ಕುಲಪತಿಗಳಿಗೆ ಸಂಪೂರ್ಣ ಅಧಿಕಾರ ನೀಡುತ್ತೇನೆ. ಆದರೆ ವಿವಿಗಳಲ್ಲಿ ರಾಜಕೀಯ ಸಹಿಸುವುದಿಲ್ಲ ಎಂದು ಎಚ್ಚರಿಕ ನೀಡಿದರು.

ಅಲ್ಲದೇ ವಿವಿಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಕುಲಪತಿಗಳು ಯಾವಾಗ ಬೇಕಾದರೂ ನನ್ನನ್ನು ಭೇಟಿ ಮಾಡಬಹುದು. ಮೈಸೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ಮುಕ್ತ ವಿವಿ ಕುಲಪತಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ' ಎಂದು ಈ ಸಂದರ್ಭದಲ್ಲಿ ಹೊಗಳಿದರು.
ಸಂಬಂಧಿತ ಮಾಹಿತಿ ಹುಡುಕಿ