ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಾಲಪ್ಪ ಕೆಮ್ಮು,ನಿಶ್ಯಕ್ತಿಯಿಂದ ಬಳಲುತ್ತಿದ್ದಾರೆ: ಡಾ.ತಿಲಕ್ (Halappa | Shivmoga | Victoriya | BJP | Yeddyurappa)
Bookmark and Share Feedback Print
 
ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಕೆಮ್ಮು, ಜ್ವರ ಮತ್ತು ನಿಶ್ಯಕ್ತಿಯಿಂದ ಬಳಲುತ್ತಿದ್ದು ಅವರಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಮುಖವಾದ ಕೂಡಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಾಧಿಕಾರಿ ಬಿ.ಜೆ.ತಿಲಕ್ ತಿಳಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಾಲಪ್ಪ ಅವರಿಗೆ ಬುಧವಾರ ಎದೆನೋವು ಕಾಣಿಸಿಕೊಂಡ ಪರಿಣಾಮ ಜಯದೇವ ಹೃದ್ರೋಗ ಆಸ್ಪತ್ರೆಯ ವೈದ್ಯರು ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಪರೀಕ್ಷಿಸಿ ಚಿಕಿತ್ಸೆ ನೀಡಿದ್ದಾರೆ. ಅವರಿಗೆ ಈಗಾಗಲೇ ಹಲವಾರು ಪರೀಕ್ಷೆಗಳನ್ನು ನಡೆಸಲಾಗಿದೆ, ಅದರ ವರದಿ ಬಂದ ನಂತರ ಅಗತ್ಯವೆನಿಸಿದರೆ ಹಾಲಪ್ಪರನ್ನು ಜಯದೇವ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರನ್ನು ಸಿಐಡಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನ್ಯಾಯಾಂಗ ಬಂಧನವನ್ನೂ ವಿಧಿಸಿತ್ತು. ಆದರೆ ಹಾಲಪ್ಪ ಅನಾರೋಗ್ಯದ ನೆಪವೊಡ್ಡಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಅಲ್ಲಿ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಮೆಗ್ಗಾನ್ ಆಸ್ಪತ್ರೆಯಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಜ್ವರ, ಕೆಮ್ಮು ಹಾಗೂ ಎದೆನೋವಿನಿಂದ ಬಳಲುತ್ತಿರುವ ಹಾಲಪ್ಪ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮೂರು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇರುವುದಾಗಿ ಡಾ.ತಿಲಕ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ