ಸ್ವತಃ ತಂದೆಯೇ ತನ್ನ ಹತ್ತರ ಹರೆಯದ ಮಗಳ ಮೇಲೆ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ನಗರದ ಮೈಕೋ ಲೇಔಟ್ ಸ್ಲಮ್‌ವೊಂದರಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಆರು ತಿಂಗಳಿನಿಂದ ಈ ಕಾಮುಕ ತಂದೆ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ. ಮಗುವಿನ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ನಡೆಸುತ್ತಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ.
ಮೈಕೋ ಲೇಔಟ್‌ನ ಜೆಡಿಮರ ಸ್ಲಮ್ ನಿವಾಸಿ ಲಕ್ಷ್ಮಣ್ ಎಂಬ ಕಾಮುಕ ತಂದೆ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಾನು ಕೆಲವು ತಿಂಗಳಿನಿಂದ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ ವಿಷಯವನ್ನು ತನಿಖೆಯ ವೇಳೆ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಮೈಕೋ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ಈ ಸಂದರ್ಭದಲ್ಲಿ ಹೇಳಿದ್ದಾರೆ.