ಭಾರತದಲ್ಲಿ ಭಯೋತ್ಪಾದನೆ ಹುಟ್ಟಿಕೊಂಡಿದ್ದೇ ಆರ್ಎಸ್ಎಸ್ ಮತ್ತು ಜನಸಂಘದಿಂದ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 19ನೇ ಪುಣ್ಯತಿಥಿ ಅಂಗವಾಗಿ ಶುಕ್ರವಾರ ಕೆಪಿಸಿಸಿ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಸಂಘ ಪರಿವಾರದವರಿಂದಲೇ ಭಯೋತ್ಪಾದನೆ ಹುಟ್ಟಲು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಯಾವುದೇ ಹೋರಾಟ ಮಾಡದ ಇವರು ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಗಾಂಧಿಯನ್ನೇ ಕೊಲೆ ಮಾಡಿದವರು. ಇಂತವರು ಭಯೋತ್ಪಾದನೆಗೆ ಕಾಂಗ್ರೆಸ್ ಕಾರಣ ಎಂದು ಹೇಳುತ್ತಿರುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.
ಕಂದಾಹಾರ್‌ನಲ್ಲಿ ವಿಮಾನ ಅಪಹರಣವಾದಾಗ ಭಯೋತ್ಪಾದಕರನ್ನು ಕರೆದೊಯ್ದು ಬಿಟ್ಟು ಬಂದ ದೇಶದ ದುರ್ಬಲ ಗೃಹ ಸಚಿವ ಎಲ್.ಕೆ ಆಡ್ವಾಣಿ ಎಂದು ಗುಡುಗಿದ ಅವರು, ಇಂತಹ ಬಿಜೆಪಿ ಮತ್ತು ಸಂಘ ಪರಿವಾರದಿಂದ ಸಾಮಾಜಿಕ ನ್ಯಾಯ ಸಿಗುವುದು ಅಸಾಧ್ಯ ಎಂದು ಹೇಳಿದರು.