ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯಸಭೆ: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕಸರತ್ತು ಆರಂಭ (BJP | JDS | Congress | Deve gowda | Desh pandy | KPCC)
Bookmark and Share Feedback Print
 
ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಕಸರತ್ತು ಅರಂಭಿಸಿದೆ.

ಈ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷವು ರಾಜ್ಯಸಭೆಯ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಸಂಶಯವಿಲ್ಲ. ಆದರೆ ಮತ್ತೊಂದು ಸ್ಥಾನವನ್ನು ಗೆಲ್ಲಲು ಜೆಡಿಎಸ್ ಸಹಕಾರ ಆಗತ್ಯವಿದೆ. ಈ ಗೆಲುವಿಗೆ ಸಹಕರಿಸಿದರೆ, ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌‌‌ಗೆ ಬೆಂಬಲ ನೀಡುವ ಪ್ರಸ್ತಾವನೆಯನ್ನು ದೇಶಪಾಂಡೆ ಜೆಡಿಎಸ್ ವರಿಷ್ಠರ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಸದ್ಯದಲ್ಲೇ ಬದಲಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸ್ವತಃ ದೇಶಪಾಂಡೆ ಅವರು ರಾಜ್ಯಸಭೆ 2ನೇ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಈ ನಿಟ್ಟಿನಲ್ಲಿ ದೇಶಪಾಂಡೆ- ದೇವೇಗೌಡ ಅವರ ಭೇಟಿಗೆ ಹೆಚ್ಚಿನ ಮಹತ್ವ ಬಂದಿದೆ.
ಸಂಬಂಧಿತ ಮಾಹಿತಿ ಹುಡುಕಿ