ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಾಲಪ್ಪ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ:ನಾಯಕ್ ಆದೇಶ (Halappa rape court)
Bookmark and Share Feedback Print
 
ತನ್ನ ಸ್ನೇಹಿತ ಮೇಲೆ ಅತ್ಯಾಚಾರವೆಸಗಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳ ಹಾಲಪ್ಪ ಅವರ ಪ್ರಕರಣವನ್ನು, ಸಿಬಿಐಗೆ ಒಪ್ಪಿಸಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ಆದೇಶ ಹೊರಡಿಸಿದೆ.

ಈ ಸಂಬಂಧ ಹರತಾಳ ಹಾಲಪ್ಪ ತನ್ನ ಸ್ನೇಹಿತನ ಪತ್ನಿ ಮೇಲೆ ಮಾಡಿರುವ ಅತ್ಯಾಚಾರ ವರದಿ, ನಂತರದ ಘಟನೆಗಳ ಹಿನ್ನೆಲೆಯಲ್ಲಿ ಸ್ವಯಂ ಪ್ರಕರಣ ದಾಖಲು ಮಾಡಿಕೊಂಡಿದ್ದ ಆಯೋಗ ಈ ಆದೇಶ ನೀಡಿದೆ.

ಅಲ್ಲದೆ, ಈ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೀಡಿದ್ದ ನೋಟಿಸ್‌ಗೆ ಅವರು ತೃಪ್ತಿಕರ ಹಾಗೂ ಸಮಂಜಸವಾದ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಹಾಗೂ ಪ್ರಕರಣದ ತೀವ್ರತೆ ಅರಿತು ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಆದೇಶಿಸಿರುವುದಾಗಿ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಸ್.ಆರ್. ನಾಯಕ್ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದರೂ ಈ ಸಂಸ್ಥೆಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವೇ ಎನ್ನುವ ಅನುಮಾನ ಕಾಡಿದೆ. ತನಿಖೆ ಆರಂಬಿಸುವ ಮುನ್ನವೇ ಆರೋಪಿಯ ರಕ್ಷಣೆಗೆ ರಾಜ್ಯ ಸರ್ಕಾರ ಮುಂದೆ ಬಂದಿರುವುದು ಈ ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ