ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ದೇವರಾಜ ಅರಸು ಇದ್ದಂತೆ: ಈಶ್ವರಪ್ಪ (Kumaraswamy | BJP | Yeddyurappa | JDS | Congress)
Bookmark and Share Feedback Print
 
ಮಾಜಿ ಮುಖ್ಯಮಂತ್ರಿಯೊಬ್ಬರ ತುಚ್ಛ ಮಾತುಗಳಿಂದ ಅವರ ಕುಲದ ಸಂಸ್ಕಾರ ತಿಳಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಪರೋಕ್ಷವಾಗಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ.

ಗ್ರಾಮದ ಸಮಸ್ಯೆಗಳ ಬಗ್ಗೆ ಲಕ್ಷ್ಯ ವಹಿಸದಿದ್ದರೆ ಮುಖ್ಯಮಂತ್ರಿ ಮತ್ತು ಸಚಿವರನ್ನು ಒದೆಯಿರಿ ಎಂದು ಮಾಜಿ ಮುಖ್ಯಮಂತ್ರಿ ಹೇಳಿಕೆ ನೀಡುತ್ತಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಕಾಲದ ದೇವರಾಜ ಅರಸು ಇದ್ದಂತೆ. ಅವರು ಕೈಗೊಂಡ ಹಿಂದುಳಿದ, ಬಡಜನರ ಪರವಾದ ಕಾರ್ಯಕ್ರಮ ನಾಡಿನ ಜನತೆ ಹಾಡಿ ಹೊಗಳುತ್ತದೆ. ಹೀಗಿರುವಾಗ ಮುಖ್ಯಮಂತ್ರಿ ಸ್ಥಾನದಲ್ಲಿ ಕೆಲಸ ಮಾಡಿದವರು ಈ ರೀತಿಯಾಗಿ ಮಾತನಾಡುವುದು ಸರಿಯೇ ಎಂದು ಪ್ರಶ್ನಿಸಿದರು.

ಪ್ರತಿಪಕ್ಷಗಳು ಟೀಕೆ ಮಾಡಬೇಕು. ಹಾಗಂತ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಈಗಲಾದರೂ ಮಾಜಿ ಮುಖ್ಯಮಂತ್ರಿ ಅವರು ತಿದ್ದಿಕೊಂಡು ಸಂಸ್ಕಾರವಂತರಾಗಿ ಮಾತನಾಡುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದರಲ್ಲದೆ, ಇನ್ನು 3 ವರ್ಷಗಳ ಕಾಲ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಸಂಬಂಧಿತ ಮಾಹಿತಿ ಹುಡುಕಿ