ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ನನ್ನ ತೇಜೋವಧೆ ಮಾಡ್ತಿದೆ: ರೇವಣ್ಣ ಕಿಡಿ (BJP | Revanna | Kumaraswamy | KMF | Yeddyurappa)
Bookmark and Share Feedback Print
 
ನನ್ನ ತೇಜೋವಧೆಗೆ ಕೆಎಂಎಫ್ ಮತ್ತು ಸಹಕಾರ ಇಲಾಖೆಯನ್ನು ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ನನ್ನ ಬಗ್ಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ನಾನೇನು ತಲೆಮರೆಸಿಕೊಂಡು ವಿದೇಶಕ್ಕೆ ಹೋಗಿಲ್ಲ. ಹಾಸನದ ಹಾಲು ಒಕ್ಕೂಟದ ಸಭೆಯಲ್ಲಿ ಭಾಗವಹಿಸಿದ್ದೇನೆ.ಒಟ್ಟಾರೆ ಇಲ್ಲಸಲ್ಲದ ಆರೋಪ ಮಾಡಿದರೆ ನಾನು ಸುಮ್ಮನೆ ಬಗ್ಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ನಾನು ನೋಟಿಸ್ ಸ್ವೀಕಾರ ಮಾಡಿಲ್ಲ ಎಂದು ಹೇಳಿದ್ದಾರೆ. ಅವರ ಬಳಿ ಏನಾದರು ಆಧಾರ ಇದೆಯಾ? ಏಕೆ ಈ ರೀತಿ ಸುಳ್ಳು ಮಾಹಿತಿ ಕೊಡುತ್ತಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಕೆಎಂಎಫ್ ಆಡಳಿತ ಹದಗೆಟ್ಟಿದೆ. ಅದು ಈಗ ವರ್ಗಾವಣೆ ದಂಧೆಯಾಗಿ ಮಾರ್ಪಟ್ಟಿದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ರೇವಣ್ಣ ಈ ಸಂದರ್ಭದಲ್ಲಿ ಆಗ್ರಹಿಸಿದರು.
ಸಂಬಂಧಿತ ಮಾಹಿತಿ ಹುಡುಕಿ