ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಗೆ ಜನರಿಂದ ನಿರೀಕ್ಷೆಗೂ ಮೀರಿ ಬೆಂಬಲ: ಸಿಎಂ (BJP | Yeddyurappa | Congress | JDS | Kumaraswamy)
Bookmark and Share Feedback Print
 
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಗೆ ಜನರು ನಿರೀಕ್ಷೆಗೂ ಮೀರಿ ಬೆಂಬಲ ಸೂಚಿಸಿದ್ದಾರೆ. ಅಲ್ಲದೇ ನಮ್ಮ ಪಕ್ಷದ ಅಭಿವೃದ್ಧಿ ಮತ್ತು ಶಕ್ತಿ ಏನೆಂಬುದಕ್ಕೆ ಜನರು ನಮಗೆ ನೀಡಿರುವ ಆಶೀರ್ವಾದವೇ ಸಾಕ್ಷಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾನುವಾರ ರಾಜಧಾನಿಗೆ ಆಗಮಿಸಿದ್ದ ಅವರು, ತಮ್ಮ ನೇತೃತ್ವದ ಬಿಜೆಪಿ ಸರ್ಕಾರ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಸ್ವಂತ ನೆಲೆಗಾಗಿ ಪರದಾಡುತ್ತಿವೆ. ಅಲ್ಲದೇ ಆ ಪಕ್ಷಗಳಲ್ಲಿಯೇ ಭಿನ್ನಾಭಿಪ್ರಾಯವಿದೆ. ಅದಕ್ಕೆ ಇತ್ತೀಚೆಗೆ ನಡೆದ ಚುನಾವಣೆಯೇ ಸಾಕ್ಷಿ. ಹಾಗಾಗಿ ಜನರು ಬಿಜೆಪಿಗೆ ನಿರೀಕ್ಷೆಗೂ ಮೀರಿ ಬೆಂಬಲ ನೀಡುತ್ತಿದ್ದಾರೆ ಎಂದರು.

ಕಳೆದ ಎರಡು ವರ್ಷಗಳಲ್ಲಿ ಹಲವು ಅಗ್ನಿಪರೀಕ್ಷೆಗಳು ಎದುರಾಗಿದ್ದರೂ ಸಹ ಪಕ್ಷ ಅದನ್ನೆಲ್ಲಾ ಸಮರ್ಥವಾಗಿ ನಿಭಾಯಿಸಿದೆ. ರೈತರ ಹೆಸರಿನಲ್ಲಿ ಪ್ರಮಾವಚನ ಸ್ವೀಕರಿಸಿರುವ ನಾನು ಜನರಿಗೆ ವಿಶ್ವಾಸದ್ರೋಹ ಮಾಡಿಲ್ಲ. ಆ ನಿಟ್ಟಿನಲ್ಲಿ ಉಳಿದ ಮೂರು ವರ್ಷಗಳಲ್ಲಿ ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸಿ ಉತ್ತಮ ಆಡಳಿತ ನೀಡುವುದಾಗಿ ಭರವಸೆ ನೀಡಿದರು.

ಆದರೆ ಸರ್ಕಾರದ ಅಭಿವೃದ್ಧಿಯನ್ನು ಸಹಿಸದ ಕಾಂಗ್ರೆಸ್ ಮತ್ತು ಜೆಡಿಎಸ್ ಜನರಿಗೆ ತಪ್ಪು ಮಾಹಿತಿ ನೀಡಿ, ಕುತಂತ್ರ ರಾಜಕೀಯ ನೀತಿಯನ್ನು ಅನುಸರಿಸುತ್ತಿರುವುದಾಗಿ ಈ ಸಂದರ್ಭದಲ್ಲಿ ಆಪಾದಿಸಿದರು.
ಸಂಬಂಧಿತ ಮಾಹಿತಿ ಹುಡುಕಿ