ಕಳ್ಳಭಟ್ಟಿ, ನಕಲಿ ಮದ್ಯ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ರೇಣುಕಾಚಾರ್ಯ ಹೇಳಿದ್ದಾರೆ.
ಶಾಸಕ ಪ್ರತಾಪಗೌಡ ಪಾಟೀಲ್ ಪುತ್ರನ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳ್ಳಭಟ್ಟಿ ತಯಾರಿಕೆ ಅಡ್ಡೆಗಳ ಮೇಲೆ ಖುದ್ದು ದಾಳಿ ನಡೆಸಿದ್ದರಿಂದ ಶೇ.90 ರಷ್ಟು ಕಳ್ಳಭಟ್ಟಿ ಕಡಿಮೆಯಾಗಿದೆ. ಕಡಿಮೆ ದರದಲ್ಲಿ ಮದ್ಯ ವಿತರಿಸಲು ರಾಜ್ಯದಲ್ಲಿ 443 ಮಾರಾಟ ಮಳಿಗೆ ತೆರೆಯಲಾಗಿದೆ ಎಂದರು.
ಪ್ರಸ್ತುತ ವಿದ್ಯುತ್ ಅಭಾವಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ದಿ ಕೆಲಸ ಕಂಡು ಪ್ರತಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ. ಬಿಜೆಪಿ ಸರಕಾರ 2 ವರ್ಷ ಅವಧಿಯಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜನಪ್ರತಿನಿಧಿಗಳಿಗೆ ಒದೆಯಿರಿ ಎಂಬ ಹೇಳಿಕೆ ಬಗ್ಗೆಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ವ್ಯಕ್ತಿತ್ವ ರಾಜ್ಯದ ಜನತೆಗೆ ಗೊತ್ತಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಸೋತು ಹತಾಶರಾಗಿ ಆ ರೀತಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.