ಉತ್ತರ ಕರ್ನಾಟಕ ಸೇರಿದಂತೆ ನೆರೆ ಪೀಡಿತ ಸಂತ್ರಸ್ತರಿಗೆ ಮನೆ ನೀಡುವಲ್ಲಿ ಸರಕಾರ ಮಾತು ತಪ್ಪಿಲ್ಲ ಎಂದು ವಾರ್ತಾ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಹೇಳಿದ ಸಮಯಕ್ಕೆ ಮನೆಗಳನ್ನು ನೀಡುವಲ್ಲಿ ಸಲ್ಪ ವಿಳಂಬವಾಗಿದೆ. ಕೆಲ ಕಾರಣಗಳಿಂದ ಕಾಮಗಾರಿ ತಡವಾಗಿದೆ ಎಂದರು.
ಆದರೂ ಸರಕಾರ ಹೇಳಿರುವಂತೆ ಮೊದಲ ಹಂತವಾಗಿ ಜೂನ್‌ನಲ್ಲಿ 20 ಸಾವಿರ ಮನೆಗಳನ್ನು ಸಂತ್ರಸ್ತರಿಗೆ ವಿತರಣೆ ಮಾಡಲಾಗುವುದು. ಮುಂದಿನ ನಾಲ್ಕು ತಿಂಗಳಲ್ಲಿ 45 ಸಾವಿರ ಮನೆ ನೀಡಲಾಗುವುದು. ಕಾಮಗಾರಿಯಲ್ಲಿ ಅವ್ಯವಹಾರ ಜರುಗಿದೆ ಎಂಬ ದೂರುಗಳು ಸತ್ಯಕ್ಕೆ ದೂರವಾದದ್ದು ಎಂದ ಅವರು, ಆ ಬಗ್ಗೆ ಸಮರ್ಪಕ ಲೆಕ್ಕಪತ್ರ, ದಾಖಲೆಗಳನ್ನು ಪರಿಶೀಲಿಸಬಹುದು ಎಂದರು.
ಸಂಪುಟ ಪುನರ್ ರಚನೆ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರವೇ ಅಂತಿಮ. ಗ್ರಾಮೀಣ ಭಾಗದಲ್ಲಿ ಬಿಪಿಒ ಕೇಂದ್ರಗಳನ್ನು ಸ್ಥಾಪಿಸಿ ಗ್ರಾಮಾಂತರ ಪ್ರದೇಶದ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದರು.