ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಪಕ್ಷ ಹೆಚ್ಚು ಕಾಲ ಉಳಿಯೋಲ್ಲ: ಅಶೋಕ್ ಭವಿಷ್ಯ (Congress | JDS | Ashok | BJP | Yeddyurappa)
Bookmark and Share Feedback Print
 
ಕಾಂಗ್ರೆಸ್ ಪಕ್ಷ ಜೋಕರ್ ಇದ್ದಂತೆ ಎಂದು ಸಾರಿಗೆ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಪಕ್ಷ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಪಟ್ಟಣದ ಬಯಲು ರಂಗಮಂದಿರದಲ್ಲಿ ಸೋಮವಾರ ನಡೆದ ವಿಧಾನಪರಿಷತ್ ಸದಸ್ಯ ಜಗ್ಗೇಶ್ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ಮತ್ತು ಜೆಡಿಎಸ್ ಸಾಧನೆ ನೋಡಿಯೇ ಜನ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ರಾಜ್ಯದ ಹಾಗೂ ರೈತರ ಅಭಿವೃದ್ಧಿ ಕೆಲಸವನ್ನು ಆ ಎರಡೂ ಪಕ್ಷಗಳು ಮಾಡಲೇ ಇಲ್ಲ. ಆದರೆ ಇದೀಗ ಬಿಜೆಪಿ ಸರ್ಕಾರದ ಅಭಿವೃದ್ಧಿಯನ್ನು ಕಂಡು ಸಹಿಸಲಾಗದೆ ಬಾಯಿಗೆ ಬಂದಂತೆ ಆರೋಪಿಸುತ್ತಿವೆ ಎಂದು ಹರಿಹಾಯ್ದರು.

ನಾವು ಅಧಿಕಾರದ ಗದ್ದುಗೆ ಏರಿದ ಎರಡು ವರ್ಷಗಳು ಮಾತ್ರ ಆಗದೆ. ಆದರೂ ನಿರೀಕ್ಷೆಗಿಂತ ಹೆಚ್ಚು ಅಭಿವೃದ್ಧಿ ಕೆಲಸ ಮಾಡಿದ್ದೇವೆ, ಆದರೆ ನೀವು ಐವತ್ತು ವರ್ಷಗಳ ಕಾಲ ಅಧಿಕಾರ ನಡೆಸಿದ್ದೀರಲ್ಲ ನಿಮ್ಮ ಸಾಧನೆ ಏನು ಎಂದು ಜನತೆಗೆ ಬಹಿರಂಗಪಡಿಸಿ ಎಂದು ಕಾಂಗ್ರೆಸ್‌ಗೆ ಸವಾಲು ಹಾಕಿದರು.

ಬಿಜೆಪಿ ಸಾಧನೆಯನ್ನು ಸಹಿಸಿಕೊಳ್ಳಲು ಆಗದೆ ವಿಪಕ್ಷಗಳು ಕೇವಲ ಗೂಬೆ ಕೂರಿಸುವ, ರಾಜ್ಯಪಾಲರಿಗೆ ದೂರು ನೀಡುವ ಕೆಲಸದಲ್ಲಿಯೇ ಮಗ್ನವಾಗಿವೆ ಎಂದು ಆರೋಪಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಎಷ್ಟೇ ಸರ್ಕಸ್ ಮಾಡಿದರೂ ಸರ್ಕಾರವನ್ನು ಉರುಳಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ