ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಕ್ಸಲ್ ಮುಖಂಡ ನಂದಕುಮಾರ್ ಪೊಲೀಸ್ ಬಲೆಗೆ? (Naxal | Shivmoga | Police | Nanda kumar | Raichuru)
Bookmark and Share Feedback Print
 
ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ನಕ್ಸಲ್ ಮುಖಂಡ ನಂದಕುಮಾರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆಂದು ಮೂಲವೊಂದು ತಿಳಿಸಿದೆ.

ಶಿವಮೊಗ್ಗ, ರಾಯಚೂರು ಜಿಲ್ಲೆಗಳಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ನಕ್ಸಲೀಯ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ನಂದಕುಮಾರ್‌ ಹಲವು ಆರೋಪಗಳನ್ನು ಎದುರಿಸುತ್ತಿದ್ದ. ನಕ್ಸಲ್ ಮುಖಂಡನಾಗಿರುವ ಈತನ ಮಾಹಿತಿ ನೀಡಿದವರಿಗೆ ಪೊಲೀಸ್ ಇಲಾಖೆ ಒಂದು ಲಕ್ಷ ರೂಪಾಯಿ ಘೋಷಿಸಿತ್ತು.

ಇದೀಗ ಖಚಿತ ಮಾಹಿತಿ ಮೇರೆಗೆ ಮಿಂಚಿನ ಕಾರ್ಯಾಚರಣೆ ನಡೆಸಿದ ನಕ್ಸಲ್ ನಿಗ್ರಹ ಪಡೆ ಮತ್ತು ಪೊಲೀಸರು ನಂದಕುಮಾರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ನಂದಕುಮಾರ್ ಬಂಧನದ ಬಗ್ಗೆ ಶಿವಮೊಗ್ಗ ಪೊಲೀಸರು ಯಾವುದೇ ಮಾಹಿತಿ ನೀಡಿಲ್ಲ.

ಸಿದ್ದನಗೌಡ ಶೂಟೌಟ್ ಪ್ರಕರಣ, ಕಲ್ಲು ತೂರಾಟ ಪ್ರಕರಣಗಳ ಆರೋಪ ಎದುರಿಸುತ್ತಿರುವ ನಂದಕುಮಾರ್‌ಗಾಗಿ ಶಿವಮೊಗ್ಗ, ರಾಯಚೂರು ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಬಿ.ಕಾಂ ಪದವೀಧರನಾಗಿರುವ ನಂದ ಕುಮಾರ್ ಶಿವಮೊಗ್ಗದ ಗಂಗಮ್ಮ ಎಂಬಾಕೆಯೊಂದಿಗೆ ವಿವಾಹವಾಗಿದ್ದ, ಆಕೆಯೂ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ