ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಚಿವ ರೇಣುಕಾಚಾರ್ಯರೇ ಎಲ್ಲಿದ್ದರೂ ಕೊಡಗಿಗೆ ಬನ್ನಿ! (Renukacharya | Kodagu | BJP | Congress | Appachhu Ranjan)
Bookmark and Share Feedback Print
 
ಸದಾ ಒಂದಲ್ಲ ಒಂದು ವಿವಾದದ ಸುಳಿಯಲ್ಲಿಯೇ ಇರುವ ಅಬಕಾರಿ ಸಚಿವ ರೇಣುಕಾಚಾರ್ಯ ವಿರುದ್ಧ ಕೊಡಗು ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಉಸ್ತುವಾರಿ ಸಚಿವರಾದರೂ ಕೂಡ ರೇಣುಕಾಚಾರ್ಯ ಇತ್ತ ಕಡೆ ತಲೆ ಹಾಕಿಲ್ಲ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಅಬಕಾರಿ ಸಚಿವ ರೇಣುಕಾಚಾರ್ಯ ಅವರನ್ನು ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ತನಗೆ ಐಶಾರಾಮಿ ಕೊಠಡಿಯನ್ನು ನಿರ್ಮಿಸುವಂತೆ ಜಿಲ್ಲಾಡಳಿತದ ಮೇಲೆ ರೇಣುಕಾಚಾರ್ಯ ಒತ್ತಡ ಹೇರಿದ್ದಾರೆನ್ನಲಾಗಿದೆ. ಉಸ್ತುವಾರಿ ಸಚಿವರ ಈ ದರ್ಪದಿಂದ ಸ್ವತ ಪಕ್ಷದ ಶಾಸಕರಾಗಿರುವ ಅಪ್ಪಚ್ಚು ರಂಜನ್ ರೋಸಿಹೋಗಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ದೂರು ನೀಡಿದ್ದಾರಂತೆ!

ಇತ್ತ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರನ್ನು ನೀಡಲು ಅವರ ಕಚೇರಿಗೆ ಜನರು ಭೇಟಿ ನೀಡುತ್ತಿದ್ದರೆ, ರೇಣುಕಾಚಾರ್ಯ ಮಾತ್ರ ಪತ್ತೆಯೇ ಇಲ್ಲ. ಉಸ್ತುವಾರಿ ಸಚಿವರ ಬೇಜವಾಬ್ದಾರಿ ನಡವಳಿಕೆಯಿಂದ ರೋಸಿಹೋದ ಜನರು ಸಚಿವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಜಿಲ್ಲಾಡಳಿತದೊಂದಿಗೆ ಮುನಿಸಿಕೊಂಡಿರುವ ರೇಣುಕಾಚಾರ್ಯ ಕೊಡಗಿನತ್ತ ತಲೆಹಾಕದೆ, ತಮ್ಮದೇ ಚಟುವಟಿಕೆಯಲ್ಲಿ ತೊಡಗಿದ್ದಾರೆಂಬ ಆರೋಪ ಅಪ್ಪಚ್ಚು ರಂಜನ್ ಅವರದ್ದು. ಹಾಗಾಗಿ ತಮ್ಮ ಜಿಲ್ಲೆಗೆ ಬೇರೊಬ್ಬ ಉಸ್ತುವಾರಿ ಸಚಿವರನ್ನು ನೇಮಿಸುವಂತೆ ಪಕ್ಷದ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ.

ಮತ್ತೊಂದೆಡೆ ಕೊಡಗು ಜಿಲ್ಲೆಯ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ರೇಣುಕಾಚಾರ್ಯ ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳಲು ಉತ್ಸುಕರಾಗಿದ್ದಾರಂತೆ!
ಸಂಬಂಧಿತ ಮಾಹಿತಿ ಹುಡುಕಿ