ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜವಾಬ್ದಾರಿ ಮರೆತ್ರೆ ತಾಖತ್ ತೋರಿಸ್ತೇನೆ: ಸರ್ಕಾರಕ್ಕೆ ರಾಜ್ಯಪಾಲ (BJP | Congress | Bharadwaj | Bangalore | JDS)
Bookmark and Share Feedback Print
 
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತ್ತು ಜನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದಿರುವ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಸರ್ಕಾರ ತನ್ನ ಜವಾಬ್ದಾರಿ ಮರೆತು ನಡೆದರೆ ಸಂವಿಧಾನದಲ್ಲಿನ ರಾಜ್ಯಪಾಲರ ತಾಖತ್ತು ಏನೆಂಬುದನ್ನು ತೋರಿಸಬೇಕಾದೀತು ಎಂದು ಪರೋಕ್ಷವಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ರಾಜ್ಯ ಅಲ್ಪಸಂಖ್ಯಾತರ ಆಯೋಗ ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಜವಾಬ್ದಾರಿ. ಹೀಗಾಗಿ ಪ್ರತಿಯೊಂದು ಏಳು-ಬೀಳುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ಎಂದು ಹೇಳಿದರು.

ಕರ್ನಾಟಕವನ್ನು ಸುಮಾರು ಮೂವತ್ತು ವರ್ಷಗಳಿಂದ ನೋಡುತ್ತಿದ್ದೇನೆ. ಕ್ರೈಸ್ತರು ಸೇರಿದಂತೆ ಅಲ್ಪಸಂಖ್ಯಾತರ ಮೇಲೆ ಆಗಾಗ ದಾಳಿಗಳು ನಡೆಯುತ್ತಿವೆ. ಇಂತಹ ದಾಳಿಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಸರ್ಕಾರ ತನ್ನ ಕೆಲಸವನ್ನು ಸರಿಯಾಗಿ ಮಾಡಿಕೊಂಡು ಹೋದರೆ ತಮ್ಮ ಸ್ಥಾನದಲ್ಲಿ ತಾವು ನಿಶ್ಚಿಂತೆಯಿಂದ ಕುಳಿತುಕೊಂಡಿರುತ್ತೇನೆ. ಅಲ್ಪಸಂಖ್ಯಾತರ ಮೇಲೆ ದಾಳಿ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬಂದರೆ ಮಧ್ಯಪ್ರವೇಶ ಮಾಡುವುದು ಅನಿವಾರ್ಯ ಎಂದರು.
ಸಂಬಂಧಿತ ಮಾಹಿತಿ ಹುಡುಕಿ