ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯ ವಿರೋಧಿ ನಾಯ್ಡುಗೆ ಟಿಕೆಟ್ ಕೊಡ್ಬೇಡಿ: ಬಿಜೆಪಿಗೆ ಕರವೇ (Venkaiah naidu | Rajaya sabha | Narayaya gowda | JDS | Congress)
Bookmark and Share Feedback Print
 
NRB
ಕೃಷ್ಣ-ಆಲಮಟ್ಟಿ ವಿವಾದದ ಸಂದರ್ಭದಲ್ಲಿ ಆಂಧ್ರದ ಪರ ನಿಂತ, ಹೊಗೇನಕಲ್ ವಿವಾದದ ವೇಳೆ ಮೌನವಾಗಿದ್ದ ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಬಾರದೆಂದು ಆಗ್ರಹಿಸಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಆಂಧ್ರಪ್ರದೇಶದ ವೆಂಕಯ್ಯ ನಾಯ್ಡು ಅವರನ್ನು ರಾಜ್ಯದಿಂದ ರಾಜ್ಯಸಭೆಯ ಸದಸ್ಯರನ್ನಾಗಿ ಮಾಡಬಾರದು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿ, ನಗರದ ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಾರಾಯಣಗೌಡ, ನಾಯ್ಡು ರಾಜ್ಯದಿಂದ ಎರಡು ಬಾರಿ ರಾಜ್ಯಸಭೆಗೆ ಆಯ್ಕೆಗೊಂಡಿದ್ದರೂ ಕೂಡ ಅವರು ಯಾವತ್ತೂ ಕರ್ನಾಟಕದ ಪರ ಧ್ವನಿ ಎತ್ತಿಲ್ಲ ಎಂದು ಆರೋಪಿಸಿದರು. ಸ್ವಾರ್ಥಕ್ಕಾಗಿ ಇರುವ ನಾಯ್ಡು ಅಂತಹವರು ರಾಜ್ಯದಿಂದ ರಾಜ್ಯಸಭೆಗೆ ಸ್ಪರ್ಧಿಸಲು ಅನರ್ಹರು ಎಂದು ದೂರಿದರು.

ಕರ್ನಾಟಕದಿಂದ ಅಧಿಕಾರ ಪಡೆದು ಕನ್ನಡಿಗರಿಗೆ ಅನ್ಯಾಯವಾದರೂ ಸುಮ್ಮನಿರುವ ವೆಂಕಯ್ಯನಾಯ್ಡು ಅವರನ್ನು ರಾಜ್ಯಸಭೆಗೆ ಕಳುಹಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ ಎಂದು ಕಿಡಿಕಾರಿದರು.

ಕನ್ನಡಿಗರಿಗೆ ಅವಕಾಶ ನೀಡದೇ ನೆರೆಯವರನ್ನು ರಾಜ್ಯಸಭೆಗೆ ಕಳುಹಿಸಿರುವ ನಾಡದ್ರೋಹಿ ಬಿಜೆಪಿ ಮುಖಂಡರ ವಿರುದ್ಧ ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸುವುದಾಗಿ ನಾರಾಯಣಗೌಡ ಎಚ್ಚರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ