ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಂಗನವಾಡಿ ನಿವೃತ್ತ ಕಾರ್ಯಕರ್ತೆಯರಿಗೆ ಪಿಂಚಣಿ: ಸ್ವಾಮಿ (Narendra swamy | BJP | Yeddyurappa | Pandychery)
Bookmark and Share Feedback Print
 
ಅಂಗನವಾಡಿ ನಿವೃತ್ತ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಪಿಂಚಣಿ ನೀಡಲು ಸರಕಾರ 20 ಕೋಟಿ ರೂ. ಕಾಯ್ದಿರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ನರೇಂದ್ರ ಸ್ವಾಮಿ ಹೇಳಿದರು.

ಇಲ್ಲಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹಕ್ಕೊತ್ತಾಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. 65 ವರ್ಷ ಮೇಲ್ಪಟ್ಟ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸೇವೆಯಿಂದ ನಿವೃತ್ತಿಗೊಳಿಸಿ ಪಿಂಚಣಿ ನೀಡಲು ನಿರ್ಧರಿಸಲಾಗಿದೆ. ಒಂದು ತಿಂಗಳ ಒಳಗೆ ಜಾರಿಗೆ ತರಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಪಡಿತರ ಚೀಟಿ, ಆಶ್ರಯ ಯೋಜನೆ ಮೊದಲಾದ ಸವಲತ್ತುಗಳನ್ನು ಕಲ್ಪಿಸುವ ಕುರಿತು ಚಿಂತನೆ ನಡಸಲಾಗಿದೆ. ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಮೃತಪಟ್ಟಾಗ, ಆಸ್ಪತ್ರೆ ವೈದ್ಯಕೀಯ ವೆಚ್ಚ ಪಾವತಿಗೆ 25 ಸಾವಿರ ಮತ್ತು 15 ಸಾವಿರ ನೀಡಲಾಗುತ್ತಿದೆ. ಕೇಂದ್ರದ ಸಹಯೋಗದೊಂದಿಗೆ ಜನಶ್ರೀ ಭೀಮಾ ಯೋಜನೆ ಜಾರಿಗೆ ತರಲಾಗಿದೆ.

ಕರ್ನಾಟಕದಲ್ಲಿ ಕಾರ್ಯಕರ್ತೆಯರ ಸಂಖ್ಯೆ ಹೆಚ್ಚಿಗೆ ಇರುವುದರಿಂದ ಪಾಂಡಿಚೇರಿ ಮಾದರಿಯಲ್ಲಿ ವೇತನ ನೀಡಲು ಅಸಾಧ್ಯ. ಆದರೆ ಸರಕಾರ ಬೇಡಿಕೆ ತಳ್ಳಿ ಹಾಕಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಲೇಖಕಿಯರ ತಂಡ ಪಾಂಡಿಚೇರಿಗೆ ಭೇಟಿ ನೀಡಿ ಅಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಕಾರ್ಯನಿರ್ವಹಿಸುತ್ತಿರುವ ಕುರಿತ ಅಧ್ಯಯನ ವರದಿ ಸಿದ್ಧಪಡಿತ್ತು. ವರದಿಯನ್ನು ಸಚಿವರಿಗೆ ಸಲ್ಲಿಸಲಾಯಿತು.
ಸಂಬಂಧಿತ ಮಾಹಿತಿ ಹುಡುಕಿ