ಧರ್ಮಸ್ಥಳದ ಧರ್ಮಾಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಇಡೀ ರಾಷ್ಟ್ರ ಗಮನಿಸುತ್ತಿರುವುದರಿಂದ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕುವ ಸಾಧ್ಯತೆಗಳಿವೆ ಎಂದು ಉಡುಪಿ ಶ್ರೀ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ವಿಶ್ವಾಸವ್ಯಕ್ತಪಡಿಸಿದರು.
ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ನಗರದ ಜೆಎಸ್ಎಸ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಕೈಗೊಂಡಿರುವ ಕ್ರಾಂತಿಕಾರಿ ಕೆಲಸಗಳಿಗೆ ತಾವೇ ಸಾಕ್ಷಿ ಎಂದರು.
ಉತ್ತಮ ಗುಣಗಳಿಗೆ ಶ್ರೀರಾಮನನ್ನು ನಿದರ್ಶನ ಮಾಡುವಂತೆ ಇಂದಿನ ಕಲಿಯುಗದಲ್ಲಿ ಎಲ್ಲ ರೀತಿಯ ಉತ್ತಮ ಗುಣಗಳನ್ನು ವೀರೇಂದ್ರ ಹೆಗ್ಗಡೆಯವರು ಅಳವಡಿಸಿಕೊಂಡಿದ್ದಾರೆ. ಎಲ್ಲ ವರ್ಗದ ಜನತೆಯ ಪ್ರೀತಿ, ಗೌರವಕ್ಕೆ ಪಾತ್ರರಾಗಿದ್ದಾರೆ ಎಂದರು. ಹಾಗಾಗಿ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರೆಯಬೇಕು ಎಂದು ಹೇಳಿದರು.