ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭಾರತದ ಆರ್ಥಿಕ ಸ್ಥಿರತೆಗೆ ಇಂದಿರಾ ಕಾರಣ: ಆಸ್ಕರ್ (Indira Gandhi | India | America | Oscar Fernandis | Udupi)
Bookmark and Share Feedback Print
 
ಜಾಗತಿಕ ಆರ್ಥಿಕ ಹೊಡೆತದ ಬಳಿಕ ಅಮೆರಿಕದಲ್ಲಿ ನಡೆಯುತ್ತಿರುವ ಬ್ಯಾಂಕ್‌ಗಳ ರಾಷ್ಟ್ರೀಕರಣವನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ನಾಲ್ಕು ದಶಕಗಳ ಹಿಂದೆ ಮಾಡಿದ ಫಲವಾಗಿ ಭಾರತದ ಆರ್ಥಿಕ ಸ್ಥಿತಿ ಸ್ಥಿರವಾಗಿದೆ ಎಂದು ರಾಜ್ಯಸಭೆ ಸದಸ್ಯ ಆಸ್ಕರ್ ಫರ್ನಾಂಡಿಸ್ ಹೇಳಿದರು.

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಮತ್ತು ಆಯ್ಕೆಯಾದ ಕಾಂಗ್ರೆಸ್ ಕಾರ್ಯಕರ್ತರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಅಭಿನಂದಿಸಿ ಅವರು ಮಾತನಾಡಿದರು.

ಮುಂದಿನ 10-15 ವರ್ಷಗಳಲ್ಲಿ ಭಾರತ ಬಲಿಷ್ಠ ಆರ್ಥಿಕ ಶಕ್ತಿಯಾಗಿ ಮೂಡಿಬರಲಿದೆ ಎನ್ನುವುದು ಜಗತ್ತಿನ ಮುಂದುವರಿದ ರಾಷ್ಟ್ರಗಳ ಅನಿಸಿಕೆಯಾಗಿದೆ. ಭಾರತದ ಪ್ರಧಾನಿ ಮಾತನಾಡುವ ಪ್ರತಿಯೊಂದು ಶಬ್ದವನ್ನೂ ಜಗತ್ತು ಕಾತರದಿಂದ ಕೇಳುತ್ತದೆ ಎನ್ನುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರ ಮಾತೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಭಾರತೀಯರ ಅದರಲ್ಲೂ ಯುವಜನತೆಯ ಬುದ್ದಿಮತ್ತೆಯನ್ನು ಗುರುತಿಸಿದ ಯುರೋಪ್ ಮತ್ತು ಅಮೆರಿಕ ಭಾರತ ದೇಶವೇ ನಮ್ಮ ಮುಂದಿನ ಗುರಿ ಎನ್ನುತ್ತಿವೆ. ದೇಶದ ರೈತರು, ಕಾರ್ಮಿಕರು, ಬಡಜನತೆಯನ್ನು ಮುಖ್ಯವಾಹಿನಿಯಲ್ಲಿ ಪ್ರಗತಿಯತ್ತ ಕೊಂಡೊಯ್ಯುವ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.
ಸಂಬಂಧಿತ ಮಾಹಿತಿ ಹುಡುಕಿ