ಅಕ್ರಮ ಗಣಿ- ಸಿಬಿಐ ತನಿಖೆ ಸಿಎಂಗೆ ಬಿಟ್ಟ ವಿಚಾರ: ಗವರ್ನರ್
ಬೆಂಗಳೂರು, ಶನಿವಾರ, 3 ಜುಲೈ 2010( 17:41 IST )
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ಒಪ್ಪಿಸುವುದು ಅಥವಾ ಬಿಡುವುದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಟ್ಟ ವಿಚಾರ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಈಗ ಹೆಚ್ಚು ಪ್ರಸ್ತಾಪವಾಗುತ್ತಿರುವುದು ಸಂತೋಷ ತಂದಿದೆ. ಆದರೆ ಸಿಬಿಐ ತನಿಖೆ ನಡೆಸುವುದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ ಎಂದರು.
ನಗರದಲ್ಲಿ ಶನಿವಾರ ಸಮಾರಂಭವೊಂದರ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅಕ್ರಮ ಗಣಿಗಾರಿಕೆ ಬಗ್ಗೆ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.
ಲೋಕಾಯುಕ್ತರ ರಾಜೀನಾಮೆ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು ಇದು ಗಂಭೀರವಾದ ವಿಷಯ ಎಂದರು. ಕೆಲ ಸಚಿವರ ಭ್ರಷ್ಟಾಚಾರ, ಲೋಕಾಯುಕ್ತರ ರಾಜೀನಾಮೆ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಸೂಕ್ತ ಕ್ರಮ ಜರುಗಿಸಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.