ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಪಲೋಕಾಯುಕ್ತ ಹುದ್ದೆಗೆ ನ್ಯಾ.ಎಸ್.ಬಿ.ಮಜ್ಜಗಿ: ಸರಕಾರ ಅಸ್ತು (Lokayuktha | Santhosh hgede | S.B.majjagi | BJP | Yeddyurappa)
Bookmark and Share Feedback Print
 
ಅಕ್ರಮ ಗಣಿಗಾರಿಕೆ ಕುರಿತು ವಿರೋಧ ಪಕ್ಷ ಮತ್ತು ಆಡಳಿತಾರೂಢ ಬಿಜೆಪಿ ನಡುವೆ ಜಂಗೀಕುಸ್ತಿ ಮುಂದುವರಿದಿರುವ ನಡುವೆಯೇ, ಕಳೆದ ಆರು ತಿಂಗಳಿನಿಂದ ಖಾಲಿ ಬಿದ್ದಿದ್ದ ಉಪ ಲೋಕಾಯುಕ್ತ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿ ಎಸ್.ಬಿ.ಮಜ್ಜಗಿ ಅವರನ್ನು ನೇಮಕ ಮಾಡಲು ಸರಕಾರ ಮಂಗಳವಾರ ನಿರ್ಧರಿಸಿದೆ.

ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ಬಹುದೊಡ್ಡ ಅಕ್ರಮ ಗಣಿಗಾರಿಕೆ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂಬ ವಿಪಕ್ಷಗಳ ಬೇಡಿಕೆಯನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೀಗ ಉಪ ಲೋಕಾಯುಕ್ತರನ್ನು ನೇಮಕ ಮಾಡಲು ಮೂಲಕ ಲೋಕಾಯುಕ್ತರ ಬೇಡಿಕೆಯನ್ನು ಈಡೇರಿಸಲು ಮುಂದಾಗಿದ್ದಾರೆ.
ಆ ನಿಟ್ಟಿನಲ್ಲಿ ನ್ಯಾ.ಎಸ್.ಬಿ.ಮಜ್ಜಗಿ ಅವರನ್ನು ಉಪಲೋಕಾಯುಕ್ತರನ್ನಾಗಿ ನೇಮಿಸಲು ಅವರ ಹೆಸರನ್ನು ಶಿಫಾರಸು ಮಾಡಿ ರಾಜ್ಯಪಾಲರಿಗೆ ಕಳುಹಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಲೋಕಾಯುಕ್ತಕ್ಕೆ ಆಡಳಿತಾರೂಢ ಸರಕಾರ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಅಸಮಾಧಾನದಿಂದ ನ್ಯಾ.ಸಂತೋಷ್ ಹೆಗ್ಡೆ ರಾಜೀನಾಮೆ ಕೊಟ್ಟಿದ್ದರು. ನಂತರ ನಡೆದ ಮಹತ್ವದ ಬೆಳವಣಿಗೆಯಲ್ಲಿ ಸಾರ್ವಜನಿಕರು, ವಿಪಕ್ಷಗಳು, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ ಅವರ ಕೋರಿಕೆಗೆ ಮಣಿದು ರಾಜೀನಾಮೆ ವಾಪಸ್ ಪಡೆದಿದ್ದರು. ಈ ಸಂದರ್ಭದಲ್ಲಿ ಲೋಕಾಯುಕ್ತರು ಕೇಳಿದ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು.

ಆದರೆ ಸರಕಾರ ಮಾತ್ರ ರಗಳೆ ದೇವರಿಗೆ ಮರದ ಗಂಟೆ ಎಂಬಂತೆ ಮುಖ್ಯಮಂತ್ರಿ, ಶಾಸಕರು, ಸಚಿವರನ್ನು ಹೊರತುಪಡಿಸಿ, ಪ್ರಧಾನ ಕಾರ್ಯದರ್ಶಿ, ಮುಖ್ಯಕಾರ್ಯದರ್ಶಿ ಮಟ್ಟದ ಅಧಿಕಾರಿಗಳ ಮೇಲೆ ದಾಳಿ ನಡೆಸಿ ವಿಚಾರಣೆ ನಡೆಸುವ ಅಧಿಕಾರವನ್ನಷ್ಟೇ ಕೊಟ್ಟು ಸುಮ್ಮನಾಗಿದೆ. ಈ ಬಗ್ಗೆಯೂ ಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಇದೀಗ ಅಕ್ರಮ ಗಣಿಗಾರಿಕೆ ವಿರುದ್ಧ ವಿಧಾನಮಂಡಲದ ಉಭಯ ಸದನಗಳಲ್ಲೂ ಅಹೋರಾತ್ರಿಯ ಧರಣಿ ಮುಂದುವರಿದಿದ್ದು, ಇದರಿಂದಾಗಿ ಆಡಳಿತಾರೂಢ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ಏತನ್ಮಧ್ಯೆ ಉಪಲೋಕಾಯುಕ್ತರ ನೇಮಕಕ್ಕೆ ಸರಕಾರ ಅಸ್ತು ಎಂದಿದೆ.
ಸಂಬಂಧಿತ ಮಾಹಿತಿ ಹುಡುಕಿ