ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಕ್ರಮ ಗಣಿಗಾರಿಕೆ ತನಿಖೆಗೆ ಸಿದ್ದ: ನ್ಯಾ.ಸಂತೋಷ್ ಹೆಗ್ಡೆ (Lokayuktha | Santhosh hegde | BJP | Yeddyurappa)
Bookmark and Share Feedback Print
 
ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಕಾರಿಕೆ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ಸರಕಾರ ಬಯಸಿದರೆ ಸಿದ್ಧವಿರುವುದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು 13 ತಿಂಗಳುಗಳ ಕಾಲ ಮಾತ್ರ ನನಗೆ ಅಧಿಕಾರವಿದೆ. ಆ ಅವಧಿಯಲ್ಲಿ ತನಿಖೆ ನಡೆಸಿ ಸರಕಾರಕ್ಕೆ ವರದಿ ನೀಡಲು ಸಿದ್ಧನಿದ್ದೇನೆ ಎಂದರು.

ಸದನದಲ್ಲಿ ಪ್ರತಿಪಕ್ಷಗಳು ಧರಣಿ ನಡೆಸುವುದು ಬಿಟ್ಟು ಅಕ್ರಮ ಗಣಿಗಾರಿಕೆ ಬಗ್ಗೆ ಪಕ್ಷ ಬೇಧ ಮರೆತು ಆರೋಗ್ಯಕರ ಚರ್ಚೆ ನಡೆಸಲಿ ಎಂದು ಸಲಹೆ ನೀಡಿದ ಅವರು ನಾನು ಪರಮಾಧಿಕಾರ ಕೇಳಿಲ್ಲ. ಹೆಚ್ಚಿನ ಅಧಿಕಾರವನ್ನಷ್ಟೇ ಕೇಳಿದ್ದೇನೆ. ಅದನ್ನು ಸರಕಾರ ನೀಡುವ ಭರವಸೆ ನನಗಿದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ