ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭ್ರಷ್ಟ ಸಚಿವರ ಸಂಪುಟದಿಂದ ಕೈಬಿಡಿ: ಸಿಎಂಗೆ ಗವರ್ನರ್ (BJP | Yeddyurappa | Congress | JDS | Bharadwaj)
Bookmark and Share Feedback Print
 
ರಾಜ್ಯ ಸರಕಾರ ಹಾಗೂ ನಾಡಿನ ಹಿತದೃಷ್ಟಿಯಿಂದ ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೇರವಾಗಿ ತಾಕೀತು ಮಾಡಿದ್ದಾರೆ.

ಶುಕ್ರವಾರ ಸಚಿವರಾದ ಡಾ.ವಿ.ಎಸ್.ಆಚಾರ್ಯ ಹಾಗೂ ಎಸ್.ಸುರೇಶ್ ಕುಮಾರ್ ಅವರೊಂದಿಗೆ ತಮ್ಮನ್ನು ಭೇಟಿ ಮಾಡಲು ಆಗಮಿಸಿದ್ದ ಯಡಿಯೂರಪ್ಪ ಅವರಿಗೆ ಈ ಕುರಿತು ಸಲಹೆ ನೀಡಿದ್ದಾರೆ ಎಂದು ಮೂಲವೂಂದು ತಿಳಿಸಿವೆ.

ಗುರುವಾರ ರಾತ್ರಿಯಷ್ಟೇ ರಾಜ್ಯಪಾಲರು ನಾಲ್ಕು ದಿನಗಳ ತಮ್ಮ ದೆಹಲಿ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದಿದ್ದ ಅವರು ಅಕ್ರಮ ಗಣಿಗಾರಿಕೆ ಸಂಬಂಧ ರಾಷ್ಟ್ರಪತಿ, ಪ್ರಧಾನಿ ಹಾಗೂ ಗೃಹ ಸಚಿವ ಪಿ.ಚಿದಂಬರಂ ಅವರಿಗೆ ವರದಿಯನ್ನೂ ಸಲ್ಲಿಸಿದ್ದರು.

ಈ ನಿಟ್ಟಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವೊಲಿಸಲು ಅಥವಾ ಸಮಾಧಾನಪಡಿಸುವ ಪ್ರಯತ್ನವನ್ನು ಯಡಿಯೂರಪ್ಪ ಮಾಡಿದರು. ಸುಮಾರು ಅರ್ಧ ಗಂಟೆ ಕಾಲ ಮಾತುಕತೆ ನಡೆಯಿತು. ಈ ಸಂದರ್ಭ ರಾಜ್ಯಪಾಲರು ತಮ್ಮ ಆಪ್ತ ಸಹಾಯಕರನ್ನೂ ಒಳಗೊಂಡಂತೆ ರಾಜಭವನದ ಎಲ್ಲ ಅಧಿಕಾರಿಗಳನ್ನೂ ಕೊಠಡಿಯಿಂದ ಹೊರಗೆ ಕಳುಹಿಸಿದ್ದರು.

ಮಾತುಕತೆ ವೇಳೆ ರಾಜ್ಯಪಾಲರು ಮುಖ್ಯಮಂತ್ರಿ ಅವರಿಗಾಗಲಿ ಅಥವಾ ಸರಕಾರದ ಬೇರೆ ಸಚಿವರ ಬಗ್ಗೆಯಾಗಲಿ ಹಗುರವಾಗಿ ಮಾತನಾಡಿಲ್ಲ. ಜತೆಗೆ ಸರಕಾರದ ಸಾಧನೆಗಳನ್ನೂ ಟೀಕಿಸಿಲ್ಲ. ಆದರೆ, ಅಕ್ರಮ ಗಣಿಗಾರಿಕೆ ತಡೆಗಟ್ಟಲು ಸರಕಾರ ಕೈಗೊಂಡಿರುವ ಕ್ರಮ ಸಾಲದು ಎಂಬ ಅನಿಸಿಕೆ ವ್ಯಕ್ತಪಡಿಸಿ, ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಸಚಿವರನ್ನು ಸಂಪುಟದಿಂ ಕೈಬಿಡಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ