ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರೆಡ್ಡಿ ಬ್ರದರ್ಸ್ ಶೀಘ್ರವೇ ಜೈಲಿಗೆ: ಸೂರ್ಯನಾರಾಯಣ ರೆಡ್ಡಿ (Janardana Reddy | JDS | BJP | Yeddyurappa | Congress)
Bookmark and Share Feedback Print
 
ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವ ಜಿಲ್ಲೆಯ ಸಚಿವರು ಕೆಲವೇ ದಿನಗಳಲ್ಲಿ ಜೈಲಿಗೆ ಹೋಗಲಿದ್ದು, ರಾಜ್ಯದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿರುವ ಇವರಿಗೆ ಅವನತಿ ಕಾಲ ಕೂಡಿ ಬಂದಿದೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಎನ್.ಸೂರ್ಯನಾರಾಯಣ ರೆಡ್ಡಿ ಭವಿಷ್ಯ ನುಡಿದಿದ್ದಾರೆ.

ನಗರದ ರಾಘವ ಕಲಾ ಮಂದಿರದಲ್ಲಿ ಜೆಡಿಎಸ್ ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ಸಂಚರಿಸಲು ಬಸ್ಸಿನ ಸೌಕರ್ಯವಿಲ್ಲ. ಆದರೆ, ಜಿಲ್ಲೆಯ ಸಚಿವರು ಹೆಲಿಕಾಪ್ಟರ್‌ನಲ್ಲಿ ಸಂಚರಿಸುತ್ತಿದ್ದಾರೆ. ಇವರು ಆಕಾಶದ ಮೇಲೆ ಓಡಾಡಲು ರೈತರ ಫಲವತ್ತಾದ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾರೆ. ತಮ್ಮ ಅನುಕೂಲಕ್ಕಾಗಿ ಕಾರ್ಖಾನೆಗಳನ್ನು ನಿರ್ಮಿಸಲು ಕೂಡ ರೈತರ ಭೂಮಿಯನ್ನೇ ಪಡೆಯುತ್ತಿದ್ದಾರೆ ಎಂದು ದೂರಿದರು.

ಜಿಲ್ಲೆಯ ಸಚಿವರು ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ನಿಲುವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಆ.15ರಿಂದ ತುಂಗಭದ್ರಾ ಉಳಿಸಿ, ಬಿಜೆಪಿ ಕಳಿಸಿ ಎಂಬ ಶೀರ್ಷಿಕೆಯಡಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ