ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗಣಿ ಬಿಕ್ಕಟ್ಟು ಬಗೆಹರಿಸುವಲ್ಲಿ ಸಿಎಂ ವಿಫಲ: ಧರಂಸಿಂಗ್ (Mysore | Congress | Yeddyurappa | BJP | Dharam singh)
Bookmark and Share Feedback Print
 
ಗಣಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಧರ್ಮಸಿಂಗ್ ಆರೋಪಿಸಿದ್ದಾರೆ.

ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿಗೆ ನಡೆದ ವಿಶೇಷ ಪೂಜೆ-ಪುನಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಅಧಿವೇಶನವನ್ನು ಸುಸೂತ್ರವಾಗಿ ನಡೆಸಲು ಮುಖ್ಯಮಂತ್ರಿ ಅಸಮರ್ಥರಾಗಿದ್ದಾರೆ. ಎರಡೂ ಸದನಗಳಲ್ಲಿ ಅವರು ನಡೆದುಕೊಂಡ ರೀತಿ ಸಮರ್ಥನೀಯವಲ್ಲ. ಪ್ರತಿಪಕ್ಷಗಳು ಎತ್ತಿರುವ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿಲ್ಲ. ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಅನೇಕ ವಿಧೇಯಕಗಳನ್ನು ಅಂಗೀಕರಿಸಿರುವುದು ಸಂವಿಧಾನ ವಿರೋಧಿ ಕ್ರಮ ಎಂದರು.

ಕಾಂಗ್ರೆಸ್ ಏಜೆಂಟ್‌ರಂತೆ ವರ್ತಿಸುತ್ತಿರುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ವಜಾಗೊಳಿಸಬೇಕು ಎಂಬ ರೆಡ್ಡಿ ಸೋದರರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು 'ರೆಡ್ಡಿಗಳಿಗೆ ಅದಿರು ಮಾರಿ ದುಡ್ಡು ಮಾಡುವುದನ್ನು ಬಿಟ್ಟು ಬೇರೆ ಏನು ಗೊತ್ತು? ಅವರಿಗೆ ಸಂವಿಧಾನದ ಗೊತ್ತೇ ಇಲ್ಲ' ಎಂದು ವ್ಯಂಗ್ಯವಾಡಿದರು.
ಸಂಬಂಧಿತ ಮಾಹಿತಿ ಹುಡುಕಿ