ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಡೂರಿನ ಕಾಂಗ್ರೆಸ್ ಶಾಸಕ ಕೆ.ಎಂ. ಕೃಷ್ಣಮೂರ್ತಿ ಇನ್ನಿಲ್ಲ (Bangalore | MLA | Kadur |Congress legislator | Krishnamurthy dies)
Bookmark and Share Feedback Print
 
ಕಾಂಗ್ರೆಸ್ ಶಾಸಕ ಕೆ.ಎಂ.ಕೃಷ್ಣಮೂರ್ತಿ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ನಿಧನ ಹೊಂದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

61 ವರ್ಷ ವಯಸ್ಸಿನ ಶಾಸಕ ಕೃಷ್ಣಮೂರ್ತಿ, ಚಿಕ್ಕಮಂಗಳೂರು ಜಿಲ್ಲೆಯ ಕಡೂರ ವಿಧಾನಸಭಾ ಕ್ಷೇತ್ರದಿಂದ,ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಗಂಡುಮಕ್ಕಳು ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಕಳೆದ 1994ರಿಂದ ಸತತವಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದ ಕೃಷ್ಣಮೂರ್ತಿ, ಕ್ಯಾನ್ಸರ್‌ನಿಂದಾಗಿ ಶನಿವಾರದಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಶಾಸಕ ಕೃಷ್ಣಮೂರ್ತಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶೋಕಸಂತಾಪ ವ್ಯಕ್ತಪಡಿಸಿದ್ದಾರೆ. ಕ್ಷೇತ್ರಕ್ಕಾಗಿ ಹಗಲಿರುಳು ದುಡಿಯುವ ಓರ್ವ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ